ಮಳವಳ್ಳಿ: ಸರ್ಕಾರಿ ಶಾಲೆ,ಕಾಲೇಜುಗಳಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಪೋಷಕರು ಖಾಸಗಿ ಶಿಕ್ಷಣ ಸಂಸ್ಥೆ ವ್ಯಾಮೋಹ ತೊರೆಯಬೇಕು ಪ್ರಾಂಶುಪಾಲ ಹನುಮಂತಯ್ಯ ತಿಳಿಸಿದರು.

ತಾಲ್ಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಶಿಕ್ಷಣ ವ್ಯವಸ್ಥೆಯು ಉತ್ತಮವಾಗಿದ್ದು, ನಮ್ಮೂರಿನ ಕಾಲೇಜಿನಲ್ಲೂ ಸಹ ದಾಖಲಾಗುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ದಾನಿಗಳ ನೆರವಿನಿಂದ ತುಂಬಲಾಗುತ್ತಿದೆ. ನೋಟ್ ಬುಕ್, ಸಮವಸ್ತ್ರವನ್ನು ನೀಡಲಾಗುತ್ತಿದೆ. 2025-26ನೇ ಸಾಲಿನಲ್ಲಿ ಶೇ.94ರಷ್ಟು ಫಲಿತಾಂಶ ಬಂದಿದೆ ಎಂದರು.ಟಿಎಪಿಸಿಎಂಎಸ್ ನಿರ್ದೇಶಕ ದಿಲೀಪ್ ಕುಮಾರ್(ವಿಶ್ವ) ಮಾತನಾಡಿ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸೌಲಭ್ಯ ಬಳಸಿಕೊಳ್ಳಲು ಪೋಷಕರು ಮುಂದಾಗಬೇಕು ಎಂದು ಹೇಳಿದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ಟಿ.ಆರ್.ಸೋಮೇಗೌಡ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಲಯನ್ಸ್ ನೆರವು ನೀಡಲು ಸದಾ ಸಿದ್ಧವಿದೆ ಎಂದು ಹೇಳಿದರು. ದೇವಿಪುರ, ಟಿ.ಕಾಗೇಪುರ, ಜೆ.ಸಿ.ಪುರ ಮುಂತಾದೆಡೆ ದಾಖಲಾತಿ ಆಂದೋಲನ ನಡೆಸಲಾಯಿತು. ಪ್ರಭಾರ ಪ್ರಾಂಶುಪಾಲ ಸಿ.ಮಂಜುನಾಥ್, ಉಪನ್ಯಾಸಕರಾದ ನಾಗಶ್ರೀ, ಪವಿತ್ರಾ, ಟಿ.ಸಿ.ರವಿ, ಪವಿತ್ರಾ, ಪಿಎಂಶ್ರೀ ಆದರ್ಶ ವಿದ್ಯಾಲಯದ ಎಸ್ಡಿಎಂಸಿ ಅಧ್ಯಕ್ಷ ಟಿ.ಎಂ.ಪ್ರಕಾಶ್, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುರೇಶ್, ಸೊಸೈಟಿ ಕಾರ್ಯದರ್ಶಿ ಟಿ.ಪಿ.ಸುರೇಶ್ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-40-1126299676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.