ಮಳವಳ್ಳಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮೂಲಕ ಸರ್ಕಾರದ ಸವಲತ್ತುಗಳನ್ನು ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಬಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಾಧರಯ್ಯನ ಕೆರೆಯಲ್ಲಿ ನರೇಗಾ ಕೂಲಿಕಾರರು ಹಮ್ಮಿಕೊಂಡಿದ್ದ 2026-2027ನೇ ಸಾಲಿನ ಶೈಕ್ಷಣಿಕ ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಬಡಜನರ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಎಲ್ಲ ಶಾಲೆಗಳಿಗೂ ಡಿಜಿಟಲ್ ಶಿಕ್ಷಣ ಸೌಲಭ್ಯ ಕಲ್ಪಿಸಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನರೇಗಾದ ನೂರಾರು ಮಂದಿ ಕೂಲಿಕಾರ್ಮಿಕರ ಈ ದಾಖಲಾತಿ ಆಂದೋಲನ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ಮಾತನಾಡಿ, ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಅತ್ಯಾಧುನಿಕ ಡಿಜಿಟಲ್ ಶಿಕ್ಷಣ ನೀಡಲು ಎಲ್ಲ ಸೌಲಭ್ಯ ನೀಡಲಾಗಿದೆ. ಶಾಸಕರು ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಹೆಚ್ಚಿನ ಅನುದಾನವನ್ನು ಶಾಲೆಗಳಿಗೆ ನೀಡಿ ಗುಣಾತ್ಮಕ ಶಿಕ್ಷಣ ನೀಡಲು ಒತ್ತು ನೀಡಿದ್ದಾರೆ. ಪೋಷಕರು ಸರ್ಕಾರಿ ಶಾಲೆಗಳತ್ತ ಗಮನ ಹರಿಸಬೇಕು. ನಮ್ಮ ಶಾಲೆಗಳೂ ಯಾವುದೇ ಖಾಸಗಿ ಶಾಲೆಗಳಗಿಂತ ಕಡಿಮೆ ಇಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಾಂತರಾಜು, ಹಿಂದುಳಿದ ವರ್ಷಗಳ ಇಲಾಖೆಯ ಕಲ್ಯಾಣಾಧಿಕಾರಿ ವಿನೋದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್, ಗ್ರಾ.ಪಂ.ಪಿಡಿಒ ಗಂಗಾಧರ್, ಕರ್ನಾಟಕ ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು ಹಾಗೂ ನರೇಗಾ ಕೂಲಿಕಾರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-1045727824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.