ಮಳವಳ್ಳಿ: ‘ಅತಿಥಿ ಶಿಕ್ಷಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧೆಡೆ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಮಹೇಶ್ ಕುಮಾರ್ ಆಗ್ರಹಿಸಿದರು.

ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಗುರುವಾರ ತಾಲ್ಲೂಕಿನ ಅತಿಥಿ ಶಿಕ್ಷಕರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಸುಮಾರು 52 ಸಾವಿರ ಅತಿಥಿ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶೈಕ್ಷಣಿಕ ಅರ್ಹತೆ, ಕಾರ್ಯಭಾರ ಎಲ್ಲವೂ ಕಾಯಂ ನೌಕರರಿಗೆ ಸಮನಾಗಿರುತ್ತದೆ. ಆದರೆ ಕಡಿಮೆ ಗೌರವಧನ ನೀಡಿ ಶೋಷಣೆ ಮಾಡಲಾಗುತ್ತಿದೆ. ಕನಿಷ್ಠ ವೇತನವೂ ಇಲ್ಲ, ಸೇವಾ ಭದ್ರತೆಯೂ ಇಲ್ಲದೇ ನೇಮಕಾತಿ ವಿಧಾನಗಳು ಅವೈಜ್ಞಾನಿಕವಾಗಿವೆ. ಈ ಬಗ್ಗೆ ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಬೇಸರಿಸಿದರು.

‘ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಅತಿಥಿ ಶಿಕ್ಷಕರನ್ನು ಕಾಯಂ ಮಾಡುವುದಾಗಿ ಭರವಸೆ ನೀಡಿತ್ತು, ಅಧಿಕಾರಕ್ಕೆ ಮೂರು ವರ್ಷಗಳು ಕಳೆದರೂ ಭರವಸೆ ಈಡೇರಿಸಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು ಮೌನವಹಿಸುವುದು ಸರಿಯಲ್ಲ, ಮುಖ್ಯಮಂತ್ರಿಗಳು ಈ ಸಮಸ್ಯೆಗಳನ್ನು ಬಗೆಹರಿಸಿ ನುಡಿದಂತೆ ನಡೆಯಬೇಕು’ ಎಂದು ಆಗ್ರಹಿಸಿದರು.

ಅತಿಥಿ ಶಿಕ್ಷಕರ ನೇಮಕಾತಿ ಸಂಧರ್ಭದಲ್ಲಿ ಸೇವಾನಿರತರ ಸೇವಾನುಭವಕ್ಕೆ ಆದ್ಯತೆ ನೀಡಬೇಕು. ಸೇವೆಗೆ ಸೇರಿದ ವರ್ಷಗಳಿಂದಲೂ ಅನ್ವಯವಾಗುವಂತೆ ವರ್ಷಕ್ಕೆ ಶೇ5ರಷ್ಟು ಕೃಪಾಂಕ ನೀಡುವುದರ ಜೊತೆಗೆ ಸೇವಾ ದೃಢೀಕರಣ ಪತ್ರ ನೀಡಬೇಕು. ತಿಂಗಳಿಗೆ ಕನಿಷ್ಠ ವೇತನ ₹34 ಸಾವಿರ ನೀಡಬೇಕು. ಸೇವಾಭದ್ರತೆ ನೀಡಬೇಕು. ಶೈಕ್ಷಣಿಕ ಅರ್ಹತೆ ಸಲ್ಲಿಸಿರುವ ಸೇವೆ ಪರಿಗಣಿಸಿ ಕಾಯಂ ಮಾಡಬೇಕು’ ಎಂದು ಮನವಿ ಮಾಡಿದರು.

ಸಂಘದ ಗೌರವಾಧ್ಯಕ್ಷ ಎನ್.ಎಲ್.ಭರತ್ ರಾಜ್, ಉಪಾಧ್ಯಕ್ಷರಾದ ಜೆ.ಶಿವಕುಮಾರ್, ನಂಜುಂಡಸ್ವಾಮಿ, ಶರತ್ ಕುಮಾರ್, ಹನುಮಯ್ಯ, ಪುಟ್ಟರಾಜು, ಶಿವರಾಜು, ಮಹದೇವು, ವಿಷಕಂಠಮೂರ್ತಿ, ರೇಖಾ, ಶಿವಮ್ಮ, ನಯನಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-40-293634256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.