ಮಳವಳ್ಳಿ: ಪುರೋಹಿತ ವ್ಯವಸ್ಥೆಯ ನಡುವೆಯೂ ಪ್ರತಿಯೊಬ್ಬರಿಗೂ ಶಿಕ್ಷಣ ನೀಡಿ ಮೌಢ್ಯವನ್ನು ಹೋಗಲಾಡಿಸಲು ಶ್ರಮಿಸಿದ ಜ್ಯೋತಿಬಾಫುಲೆ ಅವರು ಎಲ್ಲರಿಗೂ ಆದರ್ಶ ಎಂದು ದಲಿತ ಮುಖಂಡ ಬಿ.ಎಂ. ಕಾಂತರಾಜು ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ವೇದಿಕೆಯ ಕಚೇರಿಯಲ್ಲಿ ಶನಿವಾರ ನಡೆದ ಜ್ಯೋತಿಬಾಫುಲೆ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜ ಸುಧಾರಕ, ಕ್ರಾಂತಿಕಾರಿ ಚಿಂತಕರಾಗಿದ್ದ ಜ್ಯೋತಿಬಾಫುಲೆ ಅವರು ಶಿಕ್ಷಣ ಕ್ರಾಂತಿಯನ್ನು ಆರಂಭಿಸಿದ ಪ್ರತಿಫಲದಿಂದ ಪ್ರಸ್ತುತ ಶೋಷಿತ ಸಮುದಾಯ ಶಿಕ್ಷಣ ಪಡೆಯಲು ಸಾಧ್ಯವಾಯಿತು. ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡಲು ಮುಂದಾಗುವುದರ ಜೊತೆಗೆ ಸಮಾಜದ ಅನಿಷ್ಟಪದ್ಧತಿಗಳ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದರು.

ಜಿಲ್ಲಾ ಪರಿಷತ್ ಮಾಜಿ ಸದಸ್ಯ ಎಂ.ಎನ್. ಜಯರಾಜು ಮಾತನಾಡಿ, ‘ಜ್ಯೋತಿಬಾಫುಲೆ ಅವರ ವಿಚಾರಗಳು ನಂತರದ ದಿನಗಳಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಮೇಲೆ ಪ್ರಭಾವ ಬೀರಿ ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸಮಾನತೆಯ ಹೋರಾಟಕ್ಕೆ ನಾಂದಿ ಹಾಡಿದರು’ ಎಂದರು.

ನಿವೃತ್ತ ಪ್ರಾಂಶುಪಾಲ ಎಚ್.ಮಂಚಯ್ಯ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ವೇದಿಕೆಯಿಂದ ನಿರಂತರವಾಗಿ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಹೇಳಿದರು.

ಬಿಜಿಪುರ ರಾಗಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಪಂಡಿತಹಳ್ಳಿ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯ ಸಿದ್ದರಾಜು, ಮುಖಂಡರಾದ ಮಹದೇವಪ್ಪ, ಶಿವಕುಮಾರ್, ಅರುಣ್, ನಂಜುಂಡಸ್ವಾಮಿ, ಮರಿಸ್ವಾಮಿ, ಮಹದೇವಯ್ಯ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-40-1618961824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.