ಮಳವಳ್ಳಿ: ತಾಲ್ಲೂಕಿನ ಎಲ್ಲ 39 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಏ 17ರಿಂದ ಮೇ 26ವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಅಕ್ಕರೆಯ ಅಂಗಳವನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಅವರು ಮಾತನಾಡಿ, ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗ ದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಹೊರತುಪಡಿಸಿ 5ನೇ ತರಗತಿಯಿಂದ 8ನೇ ತರಗತಿಯ ಎಲ್ಲ ಮಕ್ಕಳು ಪಾಲ್ಗೊಂಡು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಯಶಸ್ವಿಗೊಳಿಸಬೇಕು’ ಎಂದು ಕರೆ ನೀಡಿದರು.

‘ಅರಿವು ಕೇಂದ್ರದಲ್ಲಿ ಈಗಾಗಲೇ ಮಕ್ಕಳ ಸ್ನೇಹಿ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು, ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ‘ಬೇಸಿಗೆ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡುವುದು ಶಿಬಿರದ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರ ಆಯೋಜಿಸಲಾಗುತ್ತಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-40-1063904026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.