ಮಳವಳ್ಳಿ: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಎಚ್.ನಾಗೇಶ್ ಚುನಾಯಿತರಾದರು.

ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗಾಗಿ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ನಾಗೇಶ್, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎನ್.ಚಂದ್ರಶೇಖರ್, ಖಜಾಂಚಿಯಾಗಿ ಎಂ.ಪಿ.ನಟರಾಜು ಚುನಾಯಿತರಾದರು. ಉಪಾಧ್ಯಕ್ಷರಾಗಿ ಎಂ.ನಾಗವೇಣಿ ರುದ್ರಸ್ವಾಮಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಪ್ರಶಾಂತ್ ಬಾಬು ಹಾಗೂ ಮಲ್ಲಿಕಾರ್ಜುನಸ್ವಾಮಿ ಘೋಷಿಸಿದರು.

ಅಧ್ಯಕ್ಷ ಎಚ್.ನಾಗೇಶ್ ಮಾತನಾಡಿ, ‘ಪ್ರಾಥಮಿಕ ಶಾಲಾ ಶಿಕ್ಷಕರು ನನ್ನ ಮೇಲೆ ವಿಶ್ವಾಸವಿಟ್ಟು ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಶಿಕ್ಷಕರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ₹100 ಕೋಟಿಗೂ ಅಧಿಕ ಸಿಎಸ್ಆರ್ ಅನುದಾನ ತಂದು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ರಾಜ್ಯದಲ್ಲಿ ಮಾದರಿಯಾಗಿ ರೂಪಿಸಿದ್ದಾರೆ’ ಎಂದರು.

ಮಹದೇವಸ್ವಾಮಿ, ಮಹೇಶ್, ರುದ್ರಸ್ವಾಮಿ, ಮರಿಸ್ವಾಮಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-40-769189571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.