ಮಾಲೂರು: ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ 2026–27ನೇ ಸಾಲಿನ ಸರ್ಕಾರಿ ಹಿರಿಯ ಕಿರಿಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ದಾಖಲಾತಿ ಆಂದೋಲನ ಸಭೆ ನಡೆಯಿತು.

ಈ ವೇಳೆ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಪೋಷಕರ ಮನವೊಲಿಸಿ ಶಾಲಾ ದಾಖಲಾತಿ ಹೆಚ್ಚಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕೆಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಪ್ರತಿ ವರ್ಷ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಸರ್ಕಾರಿ ಅನುದಾನ ಹಾಗೂ ದಾನಿಗಳ ಸಹಕಾರ ಪಡೆದು ಶಾಲಾ ಆವರಣದಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕು. ಶಾಲೆಯ ವ್ಯಾಪ್ತಿಯಲ್ಲಿ ಬರುವ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ದಾಖಲಾತಿ ಆಂದೋಲನ ಹಮ್ಮಿಕೊಂಡು, ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ ಎಂದು ಪೋಷಕರಿಗೆ ಮನವರಿಕೆ ಮಾಡಿಕೊಳ್ಳಬೇಕು ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಶಿಕ್ಷಕರಿಗೆ ಮುಖಛಾಯೆ ಹಾಜರಾತಿ (ಬಯೋಮೈಟ್ರಿಕ್) ಕಡ್ಡಾಯಗೊಳಿಸಲಾಗಿದೆ. ಹಾಗಾಗಿ ಪ್ರತಿಯೊಬ್ಬ ಶಿಕ್ಷಕರು ಸರಿಯಾದ ಸಮಯಕ್ಕೆ ಹಾಜರಾಗಬೇಕು.

ಪ್ರೌಢಶಾಲೆಯಲ್ಲಿ 30 ಮಕ್ಕಳು ಒಂದು ತರಗತಿಗೆ ಹಾಜರಾತಿ ಇರಬೇಕು. ಇಲ್ಲವಾದಲ್ಲಿ ಆ ತರಗತಿಗಳನ್ನು ರದ್ದುಪಡಿಸಲಾಗುವುದು. ಹಿರಿಯ, ಕಿರಿಯ, ಪ್ರಾಥಮಿಕ ಶಾಲೆಗಳಲ್ಲಿ 40 ಮಕ್ಕಳಿಗೆ ಒಬ್ಬರು ಶಿಕ್ಷಕರು ಕಾರ್ಯನಿರ್ವಹಿಸಬೇಕು. ಹೆಚ್ಚುವರಿಯಾದಲ್ಲಿ ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿಪಿ ಕೆಂಪಯ್ಯ, ಕ್ಷೇತ್ರ ಸಮನ್ವಯ ಅಧಿಕಾರಿ ವೆಂಕಟಸ್ವಾಮಿ, ಶಿಕ್ಷಣಾಧಿಕಾರಿಗಳಾದ ಮಂಜಪ್ಪ, ಕೃಷ್ಣೇಗೌಡ, ಶಶಿಧರ್, ಅಶೋಕ್, ಉಪ ಪ್ರಾಂಶುಪಾಲ ವಿಜಯ್ ಕುಮಾರ್, ರಾಮಕೃಷ್ಣ, ಸಿಆರ್ಪಿಗಳಾದ ಆನ್ಸರ್, ವೆಂಕಟೇಶ್, ನಟರಾಜ್, ವೀರಭದ್ರ, ಕಲ್ಪನಾ, ಶ್ರೀನಿವಾಸ್, ಮಂಜುಳ, ವೀಣಾ, ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-104190508

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.