ಮಂಡ್ಯ: ‘ಮಿದುಳು ಹಾಗೂ ಹೃದಯ ಸಂಬಂಧಿತ ತುರ್ತು ಪರಿಸ್ಥಿತಿಯ ಮೊದಲ ಒಂದು ಗಂಟೆಯೊಳಗೆ (ಗೋಲ್ಡನ್ ಅವರ್) ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ’ ಎಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಬಿ.ಜೆ. ಸಂದೀಪ್ ಪಟೇಲ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೈಸೂರಿನ ಮಣಿಪಾಲ್ ಆಸ್ಪತ್ರೆಯನ್ನು ಅರಸಿ ಮಂಡ್ಯದಿಂದ ಹೆಚ್ಚು ರೋಗಿಗಳು ಭೇಟಿ ನೀಡುತ್ತಾರೆ. ಆದ ಕಾರಣ ಮಿದುಳಿನ ತುರ್ತು ಪರಿಸ್ಥಿತಿ ಹಾಗೂ ಹಠಾತ್ ಹೃದಯ ಸಂಬಂಧಿತ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ ಎಂದರು.

ನ್ಯೂರೋಸರ್ಜನ್ ಡಾ.ಎ.ಆರ್. ಮಕ್ಸೂದ್ ಅಹ್ಮದ್ ಮಾತನಾಡಿ, ‘ಮಿದುಳು ಮತ್ತು ಹೃದಯ ಸಂಬಂಧಿತ ಅಟ್ಯಾಕ್ಗಳು ಒಂದೇ ಮಾದರಿಯವಾಗಿವೆ. ಎರಡಕ್ಕೂ ರಕ್ತನಾಳಗಳಲ್ಲಿ ರಕ್ತ ಸಂಚಾರಕ್ಕೆ ಅಡ್ಡಿ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ‘ಬ್ರೈನ್ ಅಟ್ಯಾಕ್’ ಲಕ್ಷಣಗಳನ್ನು ಕಡೆಗಣಿಸಬಾರದು. ಕೂಡಲೇ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ತಲೆಗೆ ಪೆಟ್ಟಾದಾಗ ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಅಗತ್ಯ. ಮೊದಲ ಎರಡು ಗಂಟೆಯಲ್ಲಿ ರೋಗಿಗೆ ಏನಾಗಿದೆ ಎಂಬುದನ್ನು ಪತ್ತೆ ಹಚ್ಚಲು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಇಲ್ಲವಾದಲ್ಲಿ ಎರಡನೇ ಹಂತದ ಬ್ರೈನ್ ಡ್ಯಾಮೆಜ್ ಆಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಕೆ ನೀಡಿದರು.

ಮಿದುಳಿಗೆ ಸಂಬಂಧಿಸದಂತೆ ‘ಬಿ ಫಾಸ್ಟ್’ ಸೂತ್ರ (ಬ್ಯಾಲೆನ್ಸ್ ತಪ್ಪುವುದು, ದೃಷ್ಟಿ ಮಂಜಾಗುವುದು, ಮುಖ ವಾಲುವಿಕೆ, ತೋಳಿನ ದೌರ್ಬಲ್ಯ, ಮಾತಿನ ತೊಂದರೆ ಮತ್ತು ತಕ್ಷಣದ ಪ್ರತಿಕ್ರಿಯೆಯ ಸಮಯ) ನೆನಪಿಟ್ಟುಕೊಳ್ಳುವಂತೆ ಸಲಹೆ ನೀಡಿದರು.

ಮಣಪಾಲ್ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಅಥವಾ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಣಿಪಾಲ್ ಫೌಂಡೇಷನ್ನಿಂದ ಸಂಸ್ಥೆ ಸಿಆರ್ಎಸ್ ನಿಧಿಯಿಂದ ₹1.5 ಲಕ್ಷದವರೆಗೆ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಂದೀಪ್ ಪಟೇಲ್ ಉತ್ತರಿಸಿದರು.

ಗೋಷ್ಠಿಯಲ್ಲಿ ವೈದ್ಯರಾದ ಡಾ.ಸಿ.ಬಿ. ಕೇಶವಮೂರ್ತಿ, ಡಾ.ಕುಪೇಂದ್ರ ಶಣೈ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-1133367101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.