ಪಾಂಡವಪುರ: ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದಕ್ಕೆ ಪೋಷಕರೇ ಹೊಣೆಗಾರರೆ ಹೊರತು ಸರ್ಕಾರವಲ್ಲ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಚಲುವರಸಿನಕೊಪ್ಪಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪೋಷಕರು ಖಾಸಗಿ ಶಾಲೆ ವ್ಯಾಮೋಹದಿಂದಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿಲ್ಲ. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಉಚಿತ ಊಟ, ಸಮವಸ್ತ್ರ ಸೇರಿದಂತೆ ಮಕ್ಕಳ ಕಲಿಕೆಗೆ ಪೂರಕವಾದ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಖಾಸಗಿ ಶಾಲೆಗಳು ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿವೆ. ಇದನ್ನು ಅರಿಯದೆ ಪೋಷಕರು ಖಾಸಗಿ ಶಾಲೆಗಳ ಮೊರೆಹೋಗುತ್ತಿರುವುದು ಬೇಸರದ ಸಂಗತಿ’ ಎಂದರು.

ಶಿಕ್ಷಣ ಹಕ್ಕನ್ನು ಕಸಿಯಬೇಡಿ: ‘ಸಂವಿಧಾನವು ಕಡ್ಡಾಯ ಶಿಕ್ಷಣವನ್ನು ಜಾರಿಗೊಳಿಸಿದೆ. 6 ರಿಂದ 14 ವಯಸ್ಸಿನ ಮಕ್ಕಳನ್ನು ಶಾಲೆಗೆ ಹೊರಗುಳಿಯದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ಶಾಲೆಗೆ ಮಕ್ಕಳನ್ನು ಪೋಷಕರು ಕಡ್ಡಾಯವಾಗಿ ಸೇರಿಸಬೇಕಿದೆ’ ಎಂದು ಹೇಳಿದರು.

ಶಾಲಾ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು. ಜಾನಪದ ವಿದ್ವಾಂಸ ಕ್ಯಾತನಹಳ್ಳಿ ರಾಮಣ್ಣ, ಅಧ್ಯಾಪನ ಟ್ರಸ್ಟ್ನ ದಿವ್ಯಾ, ಮುಖ್ಯ ಶಿಕ್ಷಕ ಕುಮಾರ, ಎಸ್ಡಿಎಂಸಿ ಅಧ್ಯಕ್ಷ ರಂಗನಾಥ್, ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್ ಹಾಗೂ ಶಾಲೆ ಶಿಕ್ಷಕರು ಇದ್ದರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಅದ್ದೂರಿಯಾಗಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ತಳಿತೋರಣ, ಹೂಗಳಿಂದ ಶಾಲೆಯನ್ನು ಅಲಂಕರಿಸಲಾಗಿತ್ತು. ಬಿಇಒ ಶ್ರೀಧರ್ಮಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಪ್ರಕಾಶ್ ಹಲವು ಶಾಲೆಗಳಿಗೆ ಭೇಟಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-40-1066672187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.