ಮಂಡ್ಯ: ‘ಕಸಾಪ ಸ್ಥಾಪನೆ ಮಾಡುವ ಮೂಲಕ ನಾಲ್ವಡಿ ಅವರು, ಕನ್ನಡಕ್ಕೆ ಅಪಾರ ಕೊಡುಗೆ ನೀಡಿ ಭಾಷಾ ಅಭಿವೃದ್ಧಿಗೆ ಶ್ರಮಿಸಿದ್ದರು’ ಎಂದು ಕಸಾಪ ಮಾಜಿ ಅಧ್ಯಕ್ಷ ಪ್ರೊ.ಜಿ.ಟಿ. ವೀರಪ್ಪ ಹೇಳಿದರು.

ನಗರರದ ಬಿ.ಎಲ್.ಎಸ್. ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಅಭಿವೃದ್ಧಿಗೆ ಸಾಹಿತ್ಯ ಪರಿಷತ್ ಕಾರ್ಯನಿರ್ವಹಿಸುತ್ತಿದ್ದು, ಇಡೀ ದೇಶದಲ್ಲಿ ಭಾಷೆ ಕುರಿತಂತೆ ಎರಡು ಮೂರು ರಾಜ್ಯಗಳಲ್ಲಿ ಮಾತ್ರ ಭಾಷಾ ಪರಿಷತ್ ಇರುವುದನ್ನು ನಾವು ಕಾಣುತ್ತೇವೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ ಸಾಹಿತ್ಯ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟ ಮಹನೀಯರು ಎಂದು ಶ್ಲಾಘಿಸಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಿ.ಹರ್ಷ ಪಣ್ಣೇದೊಡ್ಡಿ ಮಾತನಾಡಿ, ‘18 ವರ್ಷ ತುಂಬಿದ ಪ್ರತಿಯೊಬ್ಬರೂ ಪರಿಷತ್ನಲ್ಲಿ ಸದಸ್ಯತ್ವ ಪಡೆಯಬಹುದು. ಆನ್ಲೈನ್ ಮೂಲಕವೂ ಸದಸ್ಯತ್ವ ತೆಗೆದುಕೊಳ್ಳಲು ಅವಕಾಶವಿದೆ. ಎಲ್ಲರೂ ಪರಿಷತ್ನಲ್ಲಿ ಸದಸ್ಯ ತೆಗೆದುಕೊಂಡು ಕನ್ನಡ ಭಾಷೆಗೆ ದುಡಿಯಲು ಸಹಕರಿಸಿ’ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪರಿಷತ್ ಮಾಜಿ ಅಧ್ಯಕ್ಷ ಡಿ.ಪಿ. ಸ್ವಾಮಿ, ಪರಿಷತ್ ಉಪಾಧ್ಯಕ್ಷ ಪ್ರೊ.ಬಿ.ಎಸ್. ಬೋರೇಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರುಲಿಂಗು, ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ. ಭಾಸ್ಕರ್, ಕ್ರಾಂತಿಸಿಂಹ, ಬಿಎಲ್ಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಎಸ್. ಕಾರ್ತೀಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-40-1782743882

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.