ಮಂಡ್ಯ: ಕರ್ನಾಟಕ ಸಂಘದಿಂದ 9ನೇ ವರ್ಷದ ಎಂ. ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.2ರಂದು ಸಂಜೆ 5 ಗಂಟೆಗೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಪಿ.ಲೋಕೇಶ್ ಚಂದಗಾಲು ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಶಸ್ತಿಗೆ ಆನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜೆ. ಪಾಪೇಗೌಡ ಅವರನ್ನು ಆಯ್ಕೆ ಮಾಡಿದ್ದು, ₹10 ಸಾವಿರ ನಗದು, ಪ್ರಶಸ್ತಿ ಫಲಕದೊಂದಿಗೆ ಅಭಿನಂದಿಸಲಾಗುವುದು ಎಂದರು.

ಮಾಜಿ ಶಾಸಕ ಎಂ.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಕುಲಪತಿ ಎನ್.ಎಸ್. ರಾಮೇಗೌಡ ಪ್ರಶಸ್ತಿ ಪ್ರದಾನ ಮಾಡುವರು. ಶಿಕ್ಷಣ ಚಿಂತಕ ಎಸ್.ಬಿ. ಶಂಕರಗೌಡ ಅಭಿನಂದನಾ ನುಡಿಗಳನ್ನು ನುಡಿಯುವರು. ಮುಖ್ಯ ಅತಿಥಿಗಳಾಗಿ ಆನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಿಣಿಸ್ವಾಮಿ, ಜೆಡಿಎಸ್ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ದತ್ತಿ ದಾನಿ ಎಂ.ಕೆ. ಲಕ್ಷ್ಮಿ ಭಾಗವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಎಚ್.ಡಿ. ಸೋಮಶೇಖರ್, ಖಜಾಂಚಿ ಮಂಜುಳಾ ಉದಯಶಂಕರ್, ನಿರ್ದೇಶಕರಾದ ಎ.ಜೆ. ವತ್ಸಲ, ಮೋಹನ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-40-1435142544

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.