ಮಂಡ್ಯ: ‘ಯುದ್ಧದಲ್ಲಿ ಗಾಯಗೊಂಡವರಿಗೆ ನೆರವಾಗಲು ಹುಟ್ಟಿಕೊಂಡ ರೆಡ್ಕ್ರಾಸ್ ಇಂದು ವಿಶ್ವದಾದ್ಯಂತ ಸೇವಾ ಕಾರ್ಯಕ್ರಮದಲ್ಲಿ ತೊಡಗಿದೆ. ಸಹಕಾರ, ಸಹಬಾಳ್ವೆ ಎಲ್ಲವನ್ನೂ ಇಲ್ಲಿ ಕಾಣಬಹುದು’ ಎಂದು ರೆಡ್ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ತಿಳಿಸಿದರು.

ನಗರದ ಮಾಂಡವ್ಯ ಇಂಟಿಗ್ರೇಟೆಡ್ ಪಿಯು ಕಾಲೇಜಿನ ಆವರಣದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಜೂನಿಯರ್ ರೆಡ್ಕ್ರಾಸ್ ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ರೆಡ್ಕ್ರಾಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರುಣೆ, ಸೇವೆ ಮತ್ತು ಸಹಬಾಳ್ವೆಯ ಜ್ಯೋತಿಯನ್ನು ರೆಡ್ಕ್ರಾಸ್ ಬೆಳಗಿದೆ ಎಂದರು.

ರೆಡ್ಕ್ರಾಸ್ ಸಂಸ್ಥೆ ನಿರ್ದೇಶಕ ಷಡಕ್ಷರಿ ಮಾತನಾಡಿ, ‘ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿ ಹೊಂದುವುದು ಮುಖ್ಯವಾಗಬೇಕು. ರಕ್ತದಾನ ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು’ ಎಂದರು. ಕಾಲೇಜಿನ ಪ್ರಾಂಶುಪಾಲ ಕೆ.ಕೆ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ಅಧ್ಯಕ್ಷ ಡಿ.ಪಿ. ಸ್ವಾಮಿ, ಕಸಾಪ ಮಾಜಿ ಕಾರ್ಯದರ್ಶಿ ಎಂ.ಬಿ. ರಮೇಶ್, ಪರಿಸರ ರೂರಲ್ ಡೆವೆಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್, ರೆಡ್ಕ್ರಾಸ್ ಸಹ ಕಾರ್ಯದರ್ಶಿ ಎಚ್.ರಂಗಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-657529804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.