ಶ್ರೀರಂಗಪಟ್ಟಣ: ‘ಶಿಕ್ಷಕರ ಕರ್ತವ್ಯದ ದಿನವಾಗಿದ್ದ ಶನಿವಾರ ತಾಲ್ಲೂಕಿನ ಬ್ರಹ್ಮಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ತೆರೆಯದೆ ಬೀಗ ಹಾಕಿದ್ದ ಕಾರಣ ಅಧಿಕಾರಿಗಳು ಮತ್ತು ಶಿಕ್ಷಕರ ವಿರುದ್ಧ ಶಿಕ್ಷಣಾಸಕ್ತರು ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮಪುರ ಮಾರ್ಗವಾಗಿ ಮೇಳಾಪುರದತ್ತ ತೆರಳುತ್ತಿದ್ದ ‘ಸರ್ಕಾರಿ ಶಾಲೆ ನನ್ನವ್ವ’ ಆಂದೋಲನದ ಪಾದಯಾತ್ರಿಗಳು, ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಬ್ರಹ್ಮಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದ ವೇಳೆ ಶಾಲೆಯ ಮುಖ್ಯ ಪ್ರವೇಶದ್ವಾರಕ್ಕೆ ಬೀಗ ಹಾಕಲಾಗಿತ್ತು. ಇದನ್ನು ಕಂಡ ‘ಸರ್ಕಾರಿ ಶಾಲೆ ನನ್ನವ್ವ.....’ ತಂಡದ ಸಂತೋಷ್, ಬನ್ನೂರು ನಾರಾಯಣ, ಚಂದ್ರಣ್ಣ ಮುಂತಾದವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ಬೇಜವಾಬ್ದಾರಿತನದಿಂದ ಸರ್ಕಾರಿ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿವೆ. ಇಲಾಖೆಗೆ ದ್ರೋಹ ಬಗೆಯುತ್ತಿದ್ದಾರೆ. ಹೀಗಾದರೆ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯವೆ?’ ಎಂದು ಪಾದಯಾತ್ರಿಗಳ ತಂಡದ ಮುಖ್ಯಸ್ಥ ಸಂತೋಷ್ ಪ್ರಶ್ನಿಸಿದರು.

‘ಮೇ 29ರಂದು ಶಾಲೆಯನ್ನು ಸ್ವಚ್ಛಗೊಳಿಸಿ, ಮೇ 30ರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ತರಗತಿಗಳನ್ನು ಆರಂಭಿಸುವಂತೆ ಶಿಕ್ಷಣ ಇಲಾಖೆಯ ಸೂಚನೆ ಇದೆ. ಶಾಲೆ ತೆರೆಯಬೇಕಾದ ಅವಧಿಯಲ್ಲಿ ಬ್ರಹ್ಮಪುರ ಕಿರಿಯ ಪ್ರಾಥಮಿಕ ಶಾಲೆ ಮುಚ್ಚಿದ್ದರ ಬಗ್ಗೆ ಸಿಆರ್ಪಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್. ಚಂದ್ರಶೇಖರ್ ಹೇಳಿದರು.

‘ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೂ ಖಾಸಗಿ ಶಾಲೆಗಳ ಮಾದರಿಯಲ್ಲಿ ಇಂಗ್ಲಿಷ್ ಮಾಧ್ಯಮ ಸೇರಿದಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಸರ್ಕಾರಿ ಶಾಲೆಗಳು ಮುಚ್ಚಬಾರದೆಂದು ಜನ ಜಾಗೃತಿ ಮೂಡಿಸಲು ಏ.11ರಿಂದ ಮಂಡ್ಯ ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಯುತ್ತಿದೆ. ಜೂನ್ 6ಕ್ಕೆ ಪಾದಯಾತ್ರೆ 1500 ಕಿ.ಮೀ. ಕ್ರಮಿಸಲಿದೆ. ಅಂದು ಇಂಡುವಾಳು ಗ್ರಾಮದಿಂದ ಮಂಡ್ಯದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ಮಂಡ್ಯದ ಸಂಜಯ ವೃತ್ತದಲ್ಲಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ’ ಎಂದು ಬನ್ನೂರು ನಾರಾಯಣ ತಿಳಿಸಿದರು.

ತಾಲ್ಲೂಕಿನ ಪಾಲಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ಬ್ರಹ್ಮಪುರ, ನಗುವನಹಳ್ಳಿ, ಚಂದಗಾಲು, ಹೊಸೂರು, ಮೇಳಾಪುರ, ಮಹದೇವಪುರ ಮಾರ್ಗವಾಗಿ ಸಾಗಿತು.

ರೈತ ಸಂಘ (ಮೂಲ ಸಂಘಟನೆ)ದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಜ್ಞಾವಂತರ ವೇದಿಕೆ ಸಂಚಾಲಕ ಸಿ.ಎಸ್. ವೆಂಕಟೇಶ್, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಂದ್ರು, ಮಾನವ ಹಕ್ಕುಗಳ ಹೋರಾಟಗಾರ ಪ್ರಸನ್ನ, ಕೋಡಿಶೆಟ್ಟಿಪುರ ತೇಜಸ್, ಹುಬ್ಬಳ್ಳಿಯ ಆಟೋ ಚಾಲಕ ರವಿಚಂದ್ರ, ರೈತ ಮುಖಂಡರಾದ ಚಂದ್ರಣ್ಣ, ಧನುಷ್, ಸಾರಥಿ ಕೃಷ್ಣೇಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-2062754525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.