ಮಂಡ್ಯ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಪಡೆಯುವ ಮನೋಭಾವ ಬೆಳೆಸಿಕೊಂಡು ನಾಡು, ನುಡಿಗಾಗಿ ದುಡಿಯುವ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ನಗರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘ ಶನಿವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನೆ ಮತ್ತು ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಾಧಕರ ಆದರ್ಶ ಮೈಗೂಡಿಸಿ, ಅವರಂತೆ ಇತಿಹಾಸ ಸೃಷ್ಟಿಸುವಂತೆ ಬೆಳೆಯಬೇಕು. ಸಾಧಕರಾದವರು ಮಾತೃಭೂಮಿಗೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಒಕ್ಕಲಿಗರು ಒಟ್ಟುಗೂಡುವುದರಿಂದ ಸಮುದಾಯವನ್ನು ಹೊರತುಪಡಿಸಿಯೂ ಸಮಾಜಕ್ಕೆ ಸಹಕಾರಿಯಾಗಲಿದೆ ಎಂದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು ಪ್ರಾದೇಶಿಕ ನಿರ್ದೇಶಕ ಸುಧಾಕರ ಹೊಸಳ್ಳಿ ಮಾತನಾಡಿ, ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ನಾಡು ಕಟ್ಟುವ ಕಾಯಕದಲ್ಲಿ ನಿಮ್ಮ ಜ್ಞಾನ ಬಳಕೆಯಾಗಬೇಕು ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮಾತನಾಡಿ, ಮಕ್ಕಳು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂ ದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಿಮ್ಮೇಗೌಡ ಗೌಡಯ್ಯನದೊಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್.ಆರ್.ಕನ್ನಿಕಾ, ಕೆ.ಆರ್.ಪೇಟೆ ಆಡಳಿತ ವೈದ್ಯಾಧಿಕಾರಿ ಡಾ.ಅಜಿತ್, ಮಳವಳ್ಳಿ ತಾಲ್ಲೂಕಿನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹನುಮಂತಯ್ಯ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯ ವಿಶಾಲ್ರಘು, ಅಂತರರಾಷ್ಟ್ರೀಯ ಅಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು, ಹೊಸಪೇಟೆ-ತೋರಣಗಲ್ಲು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್.ಯೋಗಾನಂದ ಕೆರೆಗೋಡು, ಕೆಎಸ್ಒಯು ವೆಂಕಟೇಗೌಡ, ಹಾಪ್ಕಾಮ್ಸ್ ಮಾಜಿ ನಿರ್ದೇಶಕ ಹೊಸಹಳ್ಳಿ ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-2017996861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.