ಮಂಡ್ಯ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು ಹಾಗೂ ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ ಬೆಳೆಸಿಕೊಳ್ಳುವುದರಿಂದ ಸಾಧನೆಯತ್ತ ಗುರಿ ಮುಟ್ಟಲು ಸಾಧ್ಯವಾಗುತ್ತದೆ’ ಎಂದು ಶಾಸಕ ಪಿ. ರವಿಕುಮಾರ್ ತಿಳಿಸಿದರು.

ಮಹಿಳಾ ಸರ್ಕಾರಿ ಕಾಲೇಜಿನ (ಸ್ವಾಯುತ್ತ) ವನರಂಗ ಆವರಣದಲ್ಲಿ ಸೋಮವಾರ ನಡೆದ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ಸ್ಕೌಟ್ ಅಂಡ್ ಗೈಡ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ-2026 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಐಎಎಸ್, ಕೆಎಎಸ್ ಉಚಿತ ತರಬೇತಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ನನ್ನ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿ ಕಾರ್ಖಾನೆ ತರುವುದು ನನ್ನ ಆಸೆ ಎಂದರು.

ಜಿಲ್ಲೆಯಲ್ಲಿ ಸಾಫ್ಟ್ವೇರ್ ಕಂಪನಿಯನ್ನು ಒಂದು ತಿಂಗಳಲ್ಲಿ ಉದ್ಘಾಟನೆ ಮಾಡುತ್ತೇವೆ. 100ಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುತ್ತೇವೆ ಹಾಗೂ ನಮ್ಮ ಸರ್ಕಾರ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿಸುವ ಸಲುವಾಗಿ ಬಿಡದಿ ಹತ್ತಿರ ಎಐ ಸಿಟಿಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

‘ವಿದ್ಯಾರ್ಥಿಗಳು ಗ್ರಂಥಾಲಯವನ್ನು ಉಪಯೋಗ ಮಾಡಿಕೊಳ್ಳಬೇಕು. ಉತ್ತಮ ರೀತಿಯಲ್ಲಿ ಓದಿ ಉತ್ತಮ ಅಧಿಕಾರಿಯಾಗಿ ಸಮಾಜಕ್ಕೆ ಉತ್ತಮ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಎಸ್.ಬಿ. ವಿದ್ಯಾಸಂಸ್ಥೆ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಮಾತನಾಡಿ, ‘ಶಿಕ್ಷಣ ಎಂಬುದು ದೈಹಿಕ, ಭೌತಿಕ ಶಕ್ತಿ ಜೊತೆಗೆ ಅಂತರಂಗದ ಸಂಸ್ಕಾರ ಬೆಳೆಸುವುದಾಗಿದೆ. ಶಿಕ್ಷಣ ಎಂಬುದು ಮನುಷ್ಯನ ವರ್ತನೆ ಹಾಗೂ ಜೀವನದ ಮೌಲ್ಯಯುತ ಗುರಿಯನ್ನು ಸ್ಪಷ್ಟಪಡಿಸುವ ತರಬೇತಿಯಾಗಿದೆ’ ಎಂದರು.

ನಿವೃತ್ತ ಪ್ರಾಧ್ಯಾಪಕ ಭೈರೇಗೌಡ, ಪ್ರಾಂಶುಪಾಲ ಪ್ರೊ.ಗುರುರಾಜ್ ಪ್ರಭು ಕೆ., ಸಾಂಸ್ಕೃತಿಕ ವೇದಿಕೆ ಸಂಚಾಲಕ ದಾನೇಗೌಡ, ಖಜಾಂಚಿ ಗುಲೆ ಆರೀಫ, ಲೋಕೇಶ್ ಕೆ.ಆರ್, ನವೀನ್ ಎಸ್, ಪುಷ್ಪಲತಾ ಬಿ.ಎನ್, ಅಶೋಕ್ ಸಿ, ಶ್ರೀನಿವಾಸ್ ಕೆ.ಎನ್, ವಸಂತ ಲಕ್ಷ್ಮಿ, ರವಿಕಿರಣ್ ಕೆ.ಪಿ, ಹಾಗೂ ಹೇಮಲತಾ ಎಸ್.ಪಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-296040714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.