ಮಂಡ್ಯ: ಪ್ರಸ್ತುತ ದಿನಗಳಲ್ಲಾದರೂ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಶಿಕ್ಷೆಯ ಅಗತ್ಯವಿದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಮಹಿಳಾ ಘಟಕ ಅಧ್ಯಕ್ಷೆ ಸಿ.ಜೆ.ಸುಜಾತಾ ಕೃಷ್ಣ ಅಭಿಪ್ರಾಯಪಟ್ಟರು.

ನಗರದ ಕಲ್ಲಹಳ್ಳಿಯಲ್ಲಿರುವ ಗ್ಲೋಬಲ್ ಮಹೇಶ್ ಪಿಯು ಕಾಲೇಜು ಸಭಾಂಗಣದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು.

‘ಶೀಘ್ರ ವಿಚಾರಣೆ ನಡೆದು, ದೌರ್ಜನ್ಯ ಪ್ರಕರಣಗಳನ್ನು ಫಾಸ್ಟ್-ಟ್ರ್ಯಾಕ್ ಕೋರ್ಟ್ ಮೂಲಕ ವಿಚಾರಣೆ ನಡೆಸಿ, ಕೆಲವೇ ತಿಂಗಳುಗಳಲ್ಲಿ ಅಂತಿಮ ತೀರ್ಪು ನೀಡಿ, ಅಪರಾಧಿಗೆ ಗಲ್ಲು, ಜೀವಾವಧಿ, ಕೋಟ್ಯಾಂತರ ಪರಿಹಾರ, ದಂಢ ವಿಧಿಸಿದರೆ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣವಾಗುತ್ತದೆ’ ಎಂದು ಸಲಹೆ ನೀಡಿದರು.

ಕಸಾಪ ಮಾಜಿ ಕೋಶಾಧ್ಯಕ್ಷ ಕೃಷ್ಣೇಗೌಡ ಹುಸ್ಕೂರು ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ವಿವಾಹವಾಗಲು ಬಯಸುವ ಗಂಡುಗಳಿಗೆ ಹೆಣ್ಣು ಸಿಗುತ್ತಿಲ್ಲ. ಇದಕ್ಕೆ ಮೂಲ ಕಾರಣ ಹೆಣ್ಣುಭ್ರೂಣ ಹತ್ಯೆಯಿಂದ ಲಿಂಗಾನುಪಾತ ಕುಸಿಯುತ್ತಿದೆ. ಹೆಣ್ಣಿಗೆ ಹೆಣ್ಣೇ ಶತ್ರುವಾದಾಗ ಇಂತಹ ಸಾಮಾಜಿಕ ಸಮಸ್ಯೆ ಉಂಟಾಗಿದೆ’ ಎಂದು ಎಚ್ಚರಿಸಿದರು.

ಸಾಧಕಿಯರಿಗೆ ಗೌರವ ಸಲ್ಲಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಗ್ಲೋಬಲ್ ಮಹೇಶ್ ಪಿಯು ಕಾಲೇಜಿನ ಆಡಳಿತಾಧಿಕಾರಿ ಅಶ್ವಿನಿ ಯೋಗಾನಂದ್, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್. ವೇಣು, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶುಭದಾಯಿನಿ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ರವೀಂದ್ರ ಕಲ್ಲಹಳ್ಳಿ, ಪ್ರಚಾರ ಸಮಿತಿ ಅಧ್ಯಕ್ಷ ಅಭಿಲಾಶ್, ಸರಸ್ವತಿ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-40-1715030723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.