ಮಂಡ್ಯ: ಜಿಲ್ಲಾ ಯುವ ಬರಹಗಾರರ ಬಳಗ ವತಿಯಿಂದ ಜಿಲ್ಲೆಯ ಹಿರಿಯ ಮತ್ತು ಕಿರಿಯ ಕವಯತ್ರಿಯರ ಪ್ರತಿಭೆಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ಜಿಲ್ಲಾಮಟ್ಟದ ‘ಮಹಿಳಾ ಮುಂಗಾರು ಕವಿಗೋಷ್ಠಿ’ ಆಯೋಜಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಕವಯತ್ರಿಯರಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಬಳಗದ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.

ಜಿಲ್ಲೆಯ ಯಾವುದೇ ವಯೋಮಾನದ ಕವಯತ್ರಿಯರು ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿನಿಯರು ಯಾವುದೇ ವಸ್ತು ವಿಷಯ ಕುರಿತು ರಚಿಸಿರುವ ಇಪ್ಪತ್ತೈದು ಸಾಲುಗಳ ಮಿತಿಯಲ್ಲಿರುವ, ತಮ್ಮ ಎರಡು ಅತ್ಯುತ್ತಮ ಸ್ವರಚಿತ ಕವನಗಳನ್ನು ಕಳುಹಿಸಿಕೊಡಬೇಕು.

ಆಸಕ್ತ ಕವಯತ್ರಿಯರು ತಮ್ಮ ಕವನಗಳನ್ನು ಕಿರು ಪರಿಚಯದೊಂದಿಗೆ ಜೂನ್ 10ರೊಳಗೆ ತಲುಪುವಂತೆ ವಾಟ್ಸ್ಆ್ಯಪ್ ಸಂಖ್ಯೆ 8317457397ಗೆ ಕಳುಹಿಸಿಕೊಡಬೇಕು. ಆಯ್ಕೆಯಾದ ಕವಯತ್ರಿಯರಿಗೆ ‘ಗುಣಸಾಗರಿ ನಾಗರಾಜು ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9880264678 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-40-1979432883

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.