ಮಂಗಳೂರು: ಬ್ಯಾರಿ ಒಂದು ಪರಂಪರೆ, ಸಂಸ್ಕೃತಿಯಾಗಿದ್ದು, ಭಾಷೆಗೆ ಮಾತ್ರ ಸೀಮಿತವಲ್ಲ. ಜನಪದಕ್ಕೆ ಬೇಕಾದ ಎಲ್ಲಾ ಅಂಶಗಳೂ ಅದರಲ್ಲಿವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಎಂ.ಎ. ಖಾನ್ ಹೇಳಿದರು.

ಇಲ್ಲಿನ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ವತಿಯಿಂದ ಶನಿವಾರ ನಡೆದ ಟ್ರಸ್ಟ್ ಉದ್ಘಾಟನೆ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಇಂಗ್ಲಿಷ್, ಕನ್ನಡ ಅಥವಾ ತಿಳಿದಿರುವ ಲಿಪಿಯಲ್ಲೇ ಬ್ಯಾರಿ ಬರೆಯಬೇಕು. ಇದರಿಂದ ಭಾಷೆ ಉಳಿದು ಬೆಳೆಯಲು ಸಾಧ್ಯ ಎಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ಗೌರವಾಧ್ಯಕ್ಷ ಹಾಗೂ ಪತ್ರಕರ್ತ ಬಿ.ಎಂ. ಹನೀಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಯುನೈಟೆಡ್ ಲೀಗಲ್ ರಿಸರ್ಚ್ ಆ್ಯಂಡ್ ಜಸ್ಟಿಸ್ ಟ್ರಸ್ಟ್ ಅಧ್ಯಕ್ಷ ಬಿ. ಇಬ್ರಾಹಿಂ, ಮುಸ್ಲಿಂ ಎಜುಕೇಷನ್ ಇನ್ಸ್ಟಿಟ್ಯೂಷನ್ಸ್ ಫೆಡರೇಷನ್ ಅಧ್ಯಕ್ಷ ಮೂಸಪ್ಪ ಬ್ಯಾರಿ, ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ಅವರನ್ನು ಸನ್ಮಾನಿಸಲಾಯಿತು.ಕೇಂದ್ರದ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-1154395017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.