ಮಂಗಳೂರು: ‘ಚಿಣ್ಣರ ಚಾವಡಿ’ ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಇದೇ 11 ರಿಂದ 16ರವರೆಗೆ ನಗರದ ಸೇಂಟ್ ಅಲೋಶಿಯಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ‘ಚಿಣ್ಣರ ಕಲರವ -2026’ ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಮೇ 11ರಂದು ಬೆಳಿಗ್ಗೆ 9.30ಕ್ಕೆ ಸೇಂಟ್ ಅಲೋಶಿಯಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಫಾ.ಜಾನ್ಸನ್ ಪಿಂಟೊ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಅಶೋಕನ್ ಬೋಳಾರ, ಕಥೋಲಿಕ್ ಸಭಾದ ಮಂಗಳೂರು ಪ್ರದೇಶದ ಅಧ್ಯಕ್ಷ ಸಂತೋಷ್ ಡಿಸೋಜ, ಯುವಜನ ಮುಖಂಡ ಮೆರಿಲ್ ರೇಗೊ, ಮೆಲ್ವಿನ್ ಪಾಯಸ್, ಶಿಬಿರದ ನಿರ್ದೇಶಕರಾದ ರಂಗಕಲಾವಿದ ಪ್ರವೀಣ್ ವಿಸ್ಮಯ ಬಜಾಲ್ ಭಾಗವಹಿಸಲಿದ್ದಾರೆ.

‘5ನೇ ತರಗತಿಯಿಂದ ಪಿ.ಯು.ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ಭಾಗವಹಿಸಬಹುದು. ಆಸಕ್ತರು ಸೋಮವಾರ ಬೆಳಿಗ್ಗೆ 8.30ಕ್ಕೆ ಶಿಬಿರ ನಡೆಯುವ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು’ ಎಂದು ಚಿಣ್ಣರ ಚಾವಡಿ ಸಂಚಾಲಕ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-29-227875602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.