ಮಂಗಳೂರು: ಕರಾವಳಿಯ ಸುಸ್ಥಿರ ಭವಿಷ್ಯದ ಕುರಿತು ಚರ್ಚಿಸಲು ಆಯೋಜಿಸಿರುವ ನವದೆಹಲಿಯ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್ಎಸ್ಆರ್) ಪ್ರಾಯೋಜಕತ್ವದಲ್ಲಿ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಯೋಜಿಸಿರುವ ರಾಷ್ಟ್ರೀಯ ಸಮ್ಮೇಳನ ಮೇ 19ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

‘ಬ್ಲೂ ಇಕಾನಮಿ: ಗವರ್ನೆನ್ಸ್, ಸೊಸೈಟಿ ಆ್ಯಂಡ್ ಸಸ್ಟೇನಬಲ್ ಡೆವಲಪ್ಮೆಂಟ್’ ಶೀರ್ಷಿಕೆಯಡಿ ನಡೆಯಲಿರುವ ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ವೇದವ್ಯಾಸ ಕಾಮತ್ ವಹಿಸುವರು. ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಪ್ರೊ ಕೆ.ಆರ್ ಕವಿತಾ ಉದ್ಘಾಟಿಸುವರು. ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯ ವಿಜ್ಞಾನಿ ರಾಜೇಶ್ ಕೆ.ಎಂ, ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್ಮೆಂಟ್ನ ಸಹ ಪ್ರಾಧ್ಯಾಪಕ ನವೀನ್ ಕುಮಾರ್ ಕೆ ಹಾಗೂ ಕೇರಳದ ವಂಡೂರು ಸಹ್ಯ ಕಲಾ ಮತ್ತು ವಿಜ್ಞಾನ ಕಾಲೇಜು ಪ್ರಾಂಶುಪಾಲ ಸರ್ಫರಾಜ್ ನವಾಜ್ ಭಾಗವಹಿಸಲಿದ್ದಾರೆ.

ಕರಾವಳಿ ಅಭಿವೃದ್ಧಿ, ಮೀನುಗಾರಿಕೆಯ ಸವಾಲು, ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಮತ್ತು ಆಡಳಿತದ ವಿಚಾರಗಳ ಚರ್ಚೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-822410944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.