ಮಂಗಳೂರು: ‘ಸಮಾಜದಲ್ಲಿನ ಅಸಮಾನತೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣವು ಪ್ರಬಲ ಅಸ್ತ್ರವಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಸಾಧ್ಯ’ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಹೇಳಿದರು.

ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ನಾಲ್ಕು ಸ್ಥಳಗಳಲ್ಲಿ (ಮೇರಿಹಿಲ್ ಪಾಲೆಮಾರ್ ಕನ್ವೆನ್ಶನ್ ಸೆಂಟರ್, ಮೋರ್ಗನ್ಸ್ ಗೇಟ್ನ ಪಾಲೆಮಾರ್ ಗಾರ್ಡನ್, ಸುರತ್ಕಲ್ ಸಮೀಪದ ಪಾಲೆಮಾರ್ ಫಾರ್ಮ್ಸ್ ಸಭಾಭವನ, ಜೆಪ್ಪಿನಮೊಗರು ಕಡೆಕಾರ್ನ ನೇತ್ರಾವತಿ ಸಭಾಭವನ) ನಿರ್ಮಿಸಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸಭಾಭವನಗಳನ್ನು ಶನಿವಾರ ಮೇರಿಹಿಲ್ ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಣದಿಂದ ವ್ಯಕ್ತಿಯ ವ್ಯಕ್ತಿತ್ವ ಉನ್ನತೀಕರಣ ಜೊತೆಗೆ ಸಮಾಜದ ಸಬಲೀಕರಣ, ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿರುವ ಕೃಷ್ಣ ಜೆ. ಪಾಲೆಮಾರ್ ಅವರು, ಅನೇಕ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದಾರೆ. ಅನಾಥ ಮಕ್ಕಳನ್ನು ದತ್ತು ಪಡೆದು, ಶಿಕ್ಷಣ ನೀಡಿದ್ದಾರೆ. ಕೈಗಾರಿಕೋದ್ಯಮಿ, ಸಾಮಾಜಿಕ ಕಾರ್ಯಕರ್ತರಾಗಿರುವ ಅವರು ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ ಎಂದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ,‘ಕರ್ತವ್ಯ ನಿಷ್ಠೆ, ಬದ್ಧತೆ, ಸಾಧನೆಯ ಛಲ ಇದ್ದರೆ ಬದುಕಿನಲ್ಲಿ ಶ್ರೇಯಸ್ಸು ಕಾಣಬಹುದು ಎಂಬುದಕ್ಕೆ ಪಾಲೆಮಾರ್ ಅವರು ದೃಷ್ಟಾಂತವಾಗಿದ್ದಾರೆ. ಒಬ್ಬ ವ್ಯಕ್ತಿ ತನ್ನ ಕಾಯಕದ ಮೂಲಕ ಏಕಕಾಲದಲ್ಲಿ ನಾಲ್ಕು ಸಭಾಭವನಗಳನ್ನು ಲೋಕಾರ್ಪಣೆಗೊಳಿಸಿರುವುದು ಹಾಗೂ ಅದರಿಂದ ಬಂದ ಆದಾಯವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸಲು ಸಂಕಲ್ಪಿಸಿರುವುದು ವಿಶೇಷ. ಈ ಮೂಲಕ ರಾಷ್ಟ್ರದ ಪ್ರಗತಿಗೂ ಅವರು ಕೊಡುಗೆ ನೀಡಿದ್ದಾರೆ’ ಎಂದರು.

ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಪ್ರದೀಪ್ ಪಾಲೆಮಾರ್, ಪ್ರಸನ್ನ ಪಾಲೆಮಾರ್ ಉಪಸ್ಥಿತರಿದ್ದರು.

ಶಕ್ತಿನಗರದ ಸಾನಿಧ್ಯದ ವಿಶೇಷ ಶಾಲೆಯ ಮಕ್ಕಳು, ಸ್ನೇಹದೀಪ ಸಂಸ್ಥೆಯ ಸಂಸ್ಥಾಪಕಿ ತಬಸ್ಸುಮ್, ದ್ವೀತಿಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ, ಎಸ್ಎಸ್ಎಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಮಹಾಲಕ್ಷ್ಮಿ ಪೈ, ಮಹಾಲಕ್ಷ್ಮಿ ಭಾರ್ಗವ್, ಅಂಗವಿಕಲ ಕಲಾವಿದ ಕೌಶಿಕ್ ಆಚಾರ್ಯ, ಸಮಾಜ ಸೇವಕಿ ಗೀತಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕುತ್ತಾರು ಬಾಲಸಂರಕ್ಷಣಾ ಕೇಂದ್ರಕ್ಕೆ ಗೌರವ ಸಲ್ಲಿಸಲಾಯಿತು. ಸಂಸ್ಥೆಯ ಟ್ರಸ್ಟಿ ಜೆ. ಕೊರಗಪ್ಪ, ಎಂಜಿನಿಯರ್ ಪ್ರವೀಣ್ಕುಮಾರ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಕದ್ರಿ ನವನೀತ ಶೆಟ್ಟಿ ಸ್ವಾಗತಿಸಿದರು. ನಿತಿನ್ ಸಾಲ್ಯಾನ್, ಯಶಸ್ವಿನಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-2117220689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.