ಮಂಗಳೂರು: ‘ಇಂದಿನ ಜಗತ್ತಿನಲ್ಲಿ ಸುಶಿಕ್ಷಿತ ಮನಸ್ಸು ಮತ್ತು ದೃಢ ಕೌಶಲ ಅತಿಮುಖ್ಯ. ಇವುಗಳು ಹೇರಳ ಅವಕಾಶಗಳನ್ನು ಸೃಷ್ಟಿಸಿ ಯುವಜನರ ಭವಿಷ್ಯವನ್ನು ಇನ್ನಷ್ಟು ಉಜ್ವಲಗೊಳಿಸುತ್ತವೆ’ ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಸ್.ಭಟ್ ಅಭಿಪ್ರಾಯಪಟ್ಟರು.

ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಪ್ರಾಂಗಣದಲ್ಲಿ ಶನಿವಾರ ನಡೆದ ಎಂಟನೇ ಘಟಿಕೋತ್ಸವದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು.

‘ಶಿಕ್ಷಣದ ಮೂಲಕ ಪಡೆದ ಜ್ಞಾನವನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು’ ಎಂದರು.

ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ ಕಾರ್ಯ ನಿರ್ವಾಹಕ ಅಧ್ಯಕ್ಷ ಸತೀಶ್ ಯು.ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಎ.ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯ ವಿಶ್ವಸ್ಥ ಮಂಡಳಿ ಸದಸ್ಯರಾದ ಎ. ಮಿತ್ರಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಉಪ ಕುಲಪತಿ ಕೆ. ಸತ್ಯನಾರಾಯಣ ರೆಡ್ಡಿ, ವಿಶ್ವಸ್ಥ ಮಂಡಳಿ ಸದಸ್ಯರಾದ ಎ.ವಿಜಯಲಕ್ಷ್ಮಿ ಆರ್. ರಾವ್, ಇಶಾನ್ ರಾವ್, ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಸಂಧ್ಯಾ ಎಸ್. ಪೈ, ಕುಲಸಚಿವ ಅಜಯ್ ಕುಮಾರ್ ಭಾಗವಹಿಸಿದ್ದರು. ಘಟಿಕೋತ್ಸವದಲ್ಲಿ 626 ಸ್ನಾತಕೋತ್ತರ ಪದವಿಧರರು, 2023 ಪದವಿಧರರು ಪ್ರಮಾಣಪತ್ರ ಸ್ವೀಕರಿಸಿದರು. 236 ರ್ಯಾಂಕ್ ಮತ್ತು 48 ಪದವೀಧರರಿಗೆ ಕುಲಾಧಿಪತಿಗಳ ಚಿನ್ನದ ಪದಕವನ್ನು ನೀಡಲಾಯಿತು. ಒಬ್ಬರು ಡಿ.ಎಸ್ಸಿ., ಒಬ್ಬರು ಡಿ.ಲಿಟ್. ಮತ್ತು 118 ಮಂದಿ ಪಿಎಚ್.ಡಿ ಪದವಿ ಪಡೆದರು. ಕುಲಸಚಿವ ಡಾ. ಅನಿಲ್ ಕುಮಾರ್ ಸ್ವಾಗತಿಸಿದರು. ಮೌಲ್ಯಮಾಪನ ವಿಭಾಗದ ಕುಲಸಚಿವ ಡಿ. ಶ್ರೀನಿವಾಸ ಮಯ್ಯ ವಂದಿಸಿದರು. ಪ್ರೊ. ರೋಹನ್ ಫರ್ನಾಂಡಿಸ್ ಮತ್ತು ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-29-1049286025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.