ಮಂಗಳೂರು: ‘ಪ್ರತಿ ಮಗುವಿಗೆ ಹುಟ್ಟಿನಿಂದಲೇ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಮಕ್ಕಳ ಭವಿಷ್ಯವನ್ನು ರೂಪಿಸುವುದು ಪಠ್ಯೇತರ ಚಟುವಟಿಕೆ. ಪಠ್ಯೇತರ ಚಟುವಟಿಕೆಯಲ್ಲಿ ಮುಂದೆ ಇರುವ ಮಕ್ಕಳು ಬದುಕಿನಲ್ಲೂ ಮುಂಚೂಣಿಯಲ್ಲಿರುತ್ತಾರೆ’ ಎಂದು ಇಲ್ಲಿನ ಸೇಂಟ್ ಅಲೋಶಿಯಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಫಾ.ಜಾನ್ಸನ್ ಪಿಂಟೊ ಅಭಿಪ್ರಾಯಪಟ್ಟರು.

ಇಲ್ಲಿನ ಚಿಣ್ಣರ ಚಾವಡಿ ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಆಶ್ರಯದಲ್ಲಿ, ಸೇಂಟ್ ಅಲೋಶಿಯಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ‘ಚಿಣ್ಣರ ಕಲರವ - 2026’ ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.

‘ಶಾಲೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಬದುಕಿನಲ್ಲೂ ಯಶಸ್ವಿಯಾಗುತ್ತಾನೆ ಎನ್ನಲಾಗದು. ಅಂಕ ಗಳಿಕೆ ಜೊತೆ, ಸಮಾಜದಲ್ಲಿ ನಿರ್ಭೀತಿಯಿಂದ ಬದುಕುನ ಕೌಶಲವನ್ನೂ ರೂಢಿಸಿಕೊಳ್ಳುವುದು ಮುಖ್ಯ’ ಎಂದರು.

ಯುವಜನ ಮುಖಂಡ ಮೆರಿಲ್ ರೇಗೊ, ‘ಟಿ.ವಿ. ಹಾಗೂ ಮೊಬೈಲ್ನಿಂದಾಗಿ ಮಕ್ಕಳು ಆಟೋಟ ಚಟುವಟಿಕೆಯಲ್ಲಿ ಭಾಗವಹಿಸುವುದು ಕಡಿಮೆ ಆಗಿದೆ. ಇತರರ ಜೊತೆ ಬೆರೆಯುವಾಗ ಸಿಗುವ ಅನುಭವವೇ ಬೇರೆ. ಮಕ್ಕಳಲ್ಲಿ ಶಿಸ್ತು ಹಾಗೂ ಆತ್ಮ ಸ್ಥೈರ್ಯ ಬೆಳೆಸುವ ಇಂತಹ ಶಿಬಿರ ಸಾಮಾಜಿಕ ಪ್ರಜ್ಞೆ ಮೂಡಿಸಲು ಸಹಕಾರಿ. ’ ಎಂದರು.

ಮೆಲ್ವಿನ್ ಪಾಯಸ್, ‘ಮಗು ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಎಲೆ ಮರೆಯ ಕಾಯಿಯಂತಿದ್ದ ಅನೇಕರು ಉಜ್ವಲ ಭವಿಷ್ಯ ರೂಪಿಸಿಕೊಂಡಿದ್ದಾರೆ. ಏನನ್ನು ಬೇಕಾದರೂ ಸಾಧಿಸಬಲ್ಲೆವು ಎಂಬ ಛಲ ರೂಢಿಸಿಕೊಂಡರೆ ಎಲ್ಲವೂ ಸಾಧ್ಯ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೊ, ‘ಈಗಿನ ಶಿಕ್ಷಣದಲ್ಲಿ ಶೇ 90ಕ್ಕೂ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳೇ ಜಾಸ್ತಿ. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. ಅವರಲ್ಲಿರುವ ಪ್ರತಿಭೆ ಅರಳುವುದಕ್ಕೆ ಅವಕಾಶ ಕಲ್ಪಿಸಬೇಕು’ ಎಂದರು.

ಚಿಣ್ಣರ ಚಾವಡಿ ಅಧ್ಯಕ್ಷೆ ಪೂರ್ವಿ ಶೆಟ್ಟಿ, ಶಿಬಿರದ ನಿರ್ದೇಶಕ ಪ್ರವೀಣ್ ವಿಸ್ಮಯ ಬಜಾಲ್, ಡೋಲ್ಫಿ ಡಿಸೋಜ, ಫ್ಲೇವಿ ಕ್ರಾಸ್ತಾ ಅತ್ತಾವರ, ಅಸುಂತ ಡಿಸೋಜ, ಗ್ರೆಟ್ಟಾ ಟೀಚರ್ ಮುಂತಾದವರು ಭಾಗವಹಿಸಿದ್ದರು. ಶಿಬಿರದ ಸಂಚಾಲಕ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-1420119402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.