ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಇನ್ನೂ ಸೀಟುಗಳು ಭರ್ತಿ ಆಗಿಲ್ಲ ಎಂದು ಪ್ರಾಂಶುಪಾಲ ಲಕ್ಷ್ಮಿನಾರಾಯಣ ಸಿ.ಆರ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 3 ವರ್ಷಗಳ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು ಇದರಲ್ಲಿ ಉದ್ಯೋಗಾವಕಾಶಗಳು ಸಾಕಷ್ಟು ಇವೆ ಎಂದರು.

ಇಂಟರ್ನ್ಷಿಪ್ ವೇಳೆ ಪ್ರತಿ ವಿದ್ಯಾರ್ಥಿಗೆ ಮಾಸಿಕ ₹ 15 ಸಾವಿರದಿಂದ ₹ 20 ಸಾವಿರ ಶಿಷ್ಯವೇತನ ಸಿಗುತ್ತದೆ. ಪ್ರವೇಶಕ್ಕೆ ಎಸ್ಎಸ್ಎಲ್ಸಿ ತೇರ್ಗಡೆ ಆಗಿರಬೇಕು. ಪಿಯುಸಿಯಲ್ಲಿ ವಿಜ್ಞಾನ ಅಧ್ಯಯನ ಮಾಡಿದವರಿಗೆ ನೇರವಾಗಿ ಎರಡನೇ ವರ್ಷಕ್ಕೆ ಪ್ರವೇಶ ನೀಡಲಾಗುತ್ತದೆ. ಡಿಪ್ಲೊಮಾ ಇನ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಟರಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ನಲ್ಲಿ ಪ್ರವೇಶ ಕಲ್ಪಿಸಲಾಗುತ್ತದೆ ಎಂದರು.

ಕೋರ್ಸ್ಗೆ ₹ 35 ಸಾವಿರ ಶುಲ್ಕವಿದ್ದು 4 ಕಂತುಗಳಲ್ಲಿ ಪಾವತಿ ಮಾಡಲು ಅವಕಾಶವಿದೆ. ಎಸ್ಸಿ ಎಸ್ಟಿಯವರಿಗೆ ಸುಮಾರು ₹ 26 ಸಾವಿರದಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ. ಕೋರ್ಸ್ಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಒಂದು ವರ್ಷ ಇಂಟರ್ನ್ಷಿಪ್ ಮಾಡಬೇಕಾಗುತ್ತದೆ. ಆಗ ಪ್ರತಿ ವಿದ್ಯಾರ್ಥಿಗೆ ಮಾಸಿಕ ₹ 15 ಸಾವಿರದಿಂದ ₹20 ಸಾವಿರದ ವರೆಗೆ ಶಿಷ್ಯವೇತನ ಸಿಗುತ್ತದೆ ಎಂದು ಅವರು ಹೇಳಿದರು.

ಮಾಹಿತಿಗೆ 9008263660, 7899070548, 9741490625, 08242408003 ಸಂಪರ್ಕಿಸಬಹುದು ಎಂದು ತಿಳಿಸಿದರು. ಸಂಧ್ಯಾ ಕೆ ಮತ್ತು ಹೇಮಂತ್ ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-72067522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.