ಮಂಗಳೂರು: ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ಎಂಬಿಎ (ಐಬಿ) ಸಂಧ್ಯಾ ಕಾಲೇಜು ಮತ್ತು ಎಂಬಿಎ ಹಳೆಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ನಿರ್ವಹಣೆ ಮತ್ತು ಸಾಂಸ್ಕೃತಿಕ ಸಂಭ್ರಮ ‘ಇಕ್ವಿನೊಕ್ಸ್ ಸಂಧ್ಯಾ ಮಂಥನ್’ನ ಸ್ಪರ್ಧೆಗಳಲ್ಲಿ ಎಸ್ಡಿಎಂ ಕಾಲೇಜು ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು. ಕೆನರಾ ಕಾಲೇಜು ತಂಡ ರನ್ನರ್ ಅಪ್ ಆಯಿತು.

ರವೀಂದ್ರ ಕಲಾಭವನದಲ್ಲಿ ನಡೆದ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ‘ಕುಟುಂಬಕ್ಕೆ ದಾರಿದೀಪವಾಗಿ ದೇಶಕ್ಕೂ ಕೊಡುಗೆ ನೀಡಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಎಸ್, ನಿರಂತರ ಪ್ರಯತ್ನ, ಆತ್ಮಸ್ಥೈರ್ಯದಿಂದ ಯಶಸ್ಸು ಸಾಧ್ಯ ಎಂದರು.

ಸಂಧ್ಯಾ ಕಾರ್ಯಕ್ರಮದ ಸಲಹೆಗಾರ ಪ್ರೊ. ಜಯವಂತ ನಾಯಕ್ ಮತ್ತು ಸ್ನಾತಕೋತ್ತರ ವಿಭಾಗಗಳ ಸಲಹೆಗಾರ ಪ್ರೊ. ಅಬೂಬಕರ್ ಸಿದ್ದಿಕ್ ಮಾತನಾಡಿದರು. ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಎಂಬಿಎ ವಿಭಾಗದ ಉಪನ್ಯಾಸಕ ರಾಜೇಶ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕ ಅಹಮ್ಮದ್ ಶೋವ್ಹಾನ್ ವಂದಿಸಿದರು. ವಿದ್ಯಾರ್ಥಿನಿ ಪೂಜಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-29-1951808537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.