ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ (ಐಇಇಇ) ಬೆಂಗಳೂರು ಮತ್ತು ಮಂಗಳೂರು ಸಹಭಾಗಿತ್ವದಲ್ಲಿ ಮುಕ್ಕದ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಏ.29 ಹಾಗೂ 30ರಂದು ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ಮುಖ್ಯಸ್ಥ ರಾಮಕೃಷ್ಣ ಎನ್. ಹೆಗಡೆ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಹೊಸದಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ಸಮ್ಮೇಳನದಲ್ಲಿ 152 ಪ್ರಬಂಧಗಳು ಮಂಡನೆಯಾಗಲಿವೆ. 29ರ ಬೆಳಿಗ್ಗೆ 11 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಐಇಇಇ ಮಂಗಳೂರು ವಿಭಾಗದ ಅಧ್ಯಕ್ಷ ವೇಣುಗೋಪಾಲ ಪಿ.ಎಸ್ ಮುಖ್ಯ ಅತಿಥಿಗಳಾಗಿರುವರು. ಕುಲಾಧಿಪತಿ ಎ. ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸುವರು’ ಎಂದರು.

ಸಮ್ಮೇಳನದ ಸಂಚಾಲಕ ಪ್ರೊ. ಗೌರವ್ ಪ್ರಸಾದ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ರಾಮ ನರಸಿಂಹ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-1870603232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.