ಮಂಗಳೂರು: ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ವತಿಯಿಂದ ದಿ.ಕಾಸಿಂ ಉಳ್ಳಾಲ್ ಅವರ ‘ತರವಾಡ್’ ಬ್ಯಾರಿ ಕಾದಂಬರಿ ಬಗ್ಗೆ ಬ್ಯಾರಿ ಸಾಹಿತಿಗಳು, ಬರಹಗಾರರ ಕೂಡುವಿಕೆಯಲ್ಲಿ ಕಾದಂಬರಿಯ ತುಲನಾತ್ಮಕ ಹಿನ್ನೋಟ ಕಾರ್ಯಕ್ರಮ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಡಾ.ಶಿವರಾಮ ಕಾರಂತ ಭವನದಲ್ಲಿ ಇದೇ 17ರಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮುದಾಯದ ಸಂಶೋಧನೆ ಕೈಗೆತ್ತಿಕೊಂಡಿದ್ದು, ಅದರ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್ ಉದ್ಘಾಟಿಸುವರು. ಕತೆಗಾರ ಮುನವ್ವರ್ ಜೋಗಿಬೆಟ್ಟು ಕಾದಂಬರಿಯ ಅವಲೋಕನ ಮಾಡುವರು. ಕಾದಂಬರಿಯ ಸಾಹಿತ್ಯದ ಬಗ್ಗೆ ಸಾಹಿತಿ, ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡುವರು.

ಟ್ರಸ್ಟ್ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಅಬೂಬಕ್ಕರ್ ಸಿದ್ದಿಕ್, ಝುಲ್ಪೀಕರ್ ಖಾಸಿಮ್ ಭಾಗವಹಿಸುವರು. ಬ್ಯಾರಿ ಸಮುದಾಯದ ಹಿರಿಯ, ಕಿರಿಯ ಸಾಹಿತಿಗಳು ಕಾದಂಬರಿ ಬಗ್ಗೆ ಬೆಳಕು ಚೆಲ್ಲುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-686863905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.