ಮಂಗಳೂರು: ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಸದಾ ಸರಿಯಾದ ಮಾರ್ಗದಲ್ಲಿ ನಡೆಸುವ ಮಾರ್ಗದರ್ಶಕರು ಎಂದು ನವ ಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಉಪಾಧ್ಯಕ್ಷೆ ಎಸ್. ಶಾಂತಿ ಹೇಳಿದರು.

ಮಂಗಳವಾರ ಮುಕ್ಕ ಕ್ಯಾಂಪಸ್ನಲ್ಲಿ ನಡೆದ ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದಂತಹ ವಿದ್ಯಾಸಂಸ್ಥೆಗಳು ಯುವ ಮನಸ್ಸಗಳನ್ನು ಸನ್ಮಾರ್ಗದಲ್ಲಿ ರೂಪಿಸಿ ರಾಷ್ಟ್ರ ನಿರ್ಮಾಣಕ್ಕೆ ಮಹತ್ತರ ಕೊಡುಗೆ ನೀಡುತ್ತಿವೆ ಎಂದರು.

ಶ್ರೀನಿವಾಸ ವಿವಿ ಕುಲಾಧಿಪತಿ ಎ. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಡಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಪಪ್ರಾಂಶುಪಾಲೆ ವೇದಾವತಿ ಬಿ. ಮತ್ತು ಮಂಗಳೂರಿನ ರಾಮಾಶ್ರಮ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ರಾಜೇಶ್ ಕದ್ರಿ ಅವರಿಗೆ 2026ನೇ ಸಾಲಿನ ಎ. ಶಾಮರಾವ್ ಸ್ಮಾರಕ ‘ಸಾಧನಾ ಶ್ರೀ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀನಿವಾಸ ವಿವಿ ವಿಶ್ವಸ್ಥ ಮಂಡಳಿ ಸದಸ್ಯೆ ವಿಜಯಲಕ್ಷ್ಮಿ ಆರ್. ರಾವ್, ಮಿತ್ರಾ ಎಸ್. ರಾವ್, ಇಶಾನ್ ರಾವ್, ಉಪ ಕುಲಪತಿ ಕೆ. ಸತ್ಯನಾರಾಯಣ ರೆಡ್ಡಿ, ಕುಲ ಸಚಿವರಾದ ಅನಿಲ್ ಕುಮಾರ್, ಶ್ರೀನಿವಾಸ ಮಯ್ಯ ಡಿ., ಅಜಯ್ ಕುಮಾರ್, ಪ್ರಾಂಶುಪಾಲ ಎ. ರಾಮಕೃಷ್ಣ ಶಬರಾಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-29-799995066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.