ಉಳ್ಳಾಲ: ವಿಶ್ವವಿದ್ಯಾನಿಲಯಗಳು ಕೇವಲ ಪದವಿ ನೀಡುವ ಕೇಂದ್ರಗ ಳಾಗದೆ, ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸುವ ವೇದಿಕೆಗಳಾಗಬೇಕು. ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಬಿ.ಆರ್.ಅಂಬೇಡ್ಕರ್ ಸಂಶೋಧನಾ, ತರಬೇತಿ ಮತ್ತು ವಿಸ್ತರಣ ಕೇಂದ್ರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನವು ಕೇವಲ ಅಸ್ಪೃಶ್ಯರಿಗಲ್ಲ, ಅದು ಎಲ್ಲರಿಗಾಗಿ ರಚಿಸಲಾದ ಮಹಾನ್ ದಾಖಲೆ. ಆದರೆ, ನಾವು ಅದರ ಮೌಲ್ಯವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದೇವೆ. ಅವರ ಚಿಂತನೆಗಳು ಇನ್ನಷ್ಟು ಪ್ರಭಾವಶೀಲವಾಗಿವೆ. ಅಂಬೇಡ್ಕರ್ ಅವರ ಚಿಂತನೆಗಳು ಇಂದು ವಿದೇಶಗಳಲ್ಲಿಯೂ ಪ್ರತಿಧ್ವನಿಸುತ್ತಿವೆ ಎಂದರು.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ, ಸಮಾಜದಲ್ಲಿ ಆತ್ಮಪರಿಶೀಲನೆ ಮತ್ತು ಜಾಗೃತಿ ಮುಖ್ಯವಾಗಿದ್ದು, ಅಂಬೇಡ್ಕರ್ ಅವರನ್ನು ಸೀಮಿತ ದೃಷ್ಟಿಕೋನದಿಂದ ಓದದೆ, ವಿಶಾಲ ಪರಿಧಿಯಲ್ಲಿ ಅರ್ಥೈಸಿಕೊಳ್ಳಬೇಕು. ಅವರ ಚಿಂತನೆಗಳು ಸಮಗ್ರ ಸಮಾಜದ ಉನ್ನತಿಗಾಗಿವೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸರ್ಕಾರದಿಂದ ಸುಮಾರು ₹ 3 ಕೋಟಿ ವೆಚ್ಚದಲ್ಲಿ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಯೋಜನೆ ಜಾರಿಯಾಗುತ್ತಿದ್ದು, ಸಂಶೋಧನಾ ಚಟು ವಟಿಕೆ, ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳೊಂದಿಗೆ ಭವಿಷ್ಯ ರೂಪಿಸುವ ಕಾರ್ಯಕ್ರಮಗಳಿಗೆ ಉತ್ತೇಜಿಸುವ ಕೇಂದ್ರವಾಗಿ ಹೊರಹೊಮ್ಮಲಿ ಎಂದರು.

ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಪರೀಕ್ಷಾಂಗ ಕುಲಸಚಿವ ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಎಸ್. ಇದ್ದರು.

ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ರಾಜು ಕೃಷ್ಣ ಚಲನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಮುನಾ ಎಸ್.ಎಂ. ಅತಿಥಿ ಪರಿಚಯ ನೀಡಿದರು. ಪ್ರಶಾಂತ್ ನಾಯ್ಕ್ ನಿರೂಪಿಸಿದರು. ಎಂ.ಎಸ್.ಮುಷ್ತಾಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-1253853977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.