ಮಾನ್ವಿ: ‘ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಿಕ್ಷಣ ಅಗತ್ಯ’ ಎಂದು ಕರೇಗುಡ್ಡದ ಮಹಾಂತೇಶ್ವರಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸಿದ್ಧಾರ್ಥ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಹಾಗೂ ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಬಿರದಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳಿಂದ ದೊರೆಯುವ ವಿಷಯಗಳಿಂದ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಬೇಕು’ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಅರುಣ್ ಕುಮಾರ ಚಂದಾ ಮಾತನಾಡಿ, ‘ತಾಲ್ಲೂಕಿನಲ್ಲಿ ಎರಡನೇ ವರ್ಷದ 50 ದಿನಗಳ ಬೇಸಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು ಶಿಬಿರದಲ್ಲಿ 200ಕ್ಕೂ ಹೆಚ್ಚು ಮಕ್ಕಳು ನೋಂದಾಯಿಸಿಕೊಂಡಿದ್ದಾರೆ. ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಹಿರಿಯ ಉಪನ್ಯಾಸಕರು, ಸಾಧಕರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದಲಿಂಗಪ್ಪ ವಕೀಲ, ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ, ಗೌರವಾಧ್ಯಕ್ಷ ಶ್ರೀಧರಸ್ವಾಮಿ, ಕಾರ್ಯದರ್ಶಿ ಜಗದೀಶ ಓತೂರು, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ, ಎ. ಬಾಲಸ್ವಾಮಿ ಕೋಡ್ಲಿ, ಗಣೇಕಲ್ ಮಲ್ಲಿಕಾರ್ಜುನಗೌಡ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತಿಪ್ಪಣ್ಣ ಬಾಗಲವಾಡ, ರಾಜಾ ಸುಭಾಷ್ ಚಂದ್ರ ನಾಯಕ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-32-1742679713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.