ಮಾನ್ವಿ: ‘ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಅವರಿಗೆ ನೈತಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ’ ಎಂದು ಯೋಗ ಶಿಕ್ಷಣ ತರಬೇತುದಾರ ಅನ್ನದಾನಯ್ಯ ಸ್ವಾಮಿ ಚೀಕಲಪರ್ವಿ ಹೇಳಿದರು.

ಮಂಗಳವಾರ ಪಟ್ಟಣದ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಒಂದು ತಿಂಗಳು ನಡೆದ ಶಿಬಿರದಲ್ಲಿ ನಿತ್ಯ ಬೆಳಿಗ್ಗೆ ಯೋಗಾಸನಗಳ ಅಭ್ಯಾಸ, ಭಗವದ್ಗೀತೆ ಪಠಣ, ಭಜನೆ, ಆಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳಲ್ಲಿ ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮತ್ತು ಆರೋಗ್ಯ ಪೂರ್ಣ ಜೀವನದ ಕುರಿತು ಅರಿವು ಮೂಡಿಸಲಾಗಿದೆ' ಎಂದು ತಿಳಿಸಿದರು.

ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ ಕುಮಾರ್ ಚಿಂಚೋಳಿ, 'ಆರೋಗ್ಯದ ರಕ್ಷಣೆಗೆ ಮತ್ತು ಬುದ್ಧಿ ಶಕ್ತಿಯ ಬೆಳವಣಿಗೆಗೆ ಯೋಗಾಭ್ಯಾಸ ಅಗತ್ಯ' ಎಂದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವ ಬಿವಿಆರ್ ಶಾಲೆಯ ವಿದ್ಯಾರ್ಥಿ ಸುಖದೇವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂಜೀವ್ ಸುಧಾಕರ್, ಶಿಕ್ಷಕರಾದ ಎಚ್.ಟಿ. ಪ್ರಕಾಶ್ ಬಾಬು. ಅರುಣಕುಮಾರ. ಮಲ್ಲೇಶ ನಾಯಕ, ಸಿ.ಡಿ.ವಿಜಯಕುಮಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-32-1393198821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.