ಮಸ್ಕಿ: ‘ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂತೆ ನಾವು ಇಂದು ಸಮಾಜದಲ್ಲಿನ ಜಾತಿ, ಅಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಟ ಮಾಡಬೇಕಾದ ಅಗತ್ಯವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಯತ್ರೀಂದ್ರ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ಬಳಗಾನೂರು ಪಟ್ಟಣದಲ್ಲಿ ಭಾನುವಾರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಹಾಗೂ ವೃತ್ತ ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಅವರಂತಹ ಮಹನೀಯರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರಿಗೂ ಆದರ್ಶವಾಗಿದ್ದಾರೆ. ಅವರ ದೇಶಪ್ರೇಮ, ಸ್ವಾಮಿನಿಷ್ಠೆ ಮತ್ತು ತ್ಯಾಗ ಮನೋಭಾವವನ್ನು ಮುಂದಿನ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಾಲುಮತ ಸಮುದಾಯವು ಕನಕದಾಸರೊಂದಿಗೆ ರಾಯಣ್ಣರನ್ನು ಆರಾಧಿಸುತ್ತಿರುವುದು ಶ್ಲಾಘನೀಯ. ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಾರ್ಗ ಅನುಸರಿಸಬೇಕು ಎಂದು ಹೇಳಿದರು.

ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ತುರ್ವಿಹಾಳ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡಬಸವರಾಜ ಸೇರಿ ಅನೇಕರು ಮಾತನಾಡಿದರು.

ಹಾಲುಮತ ಸಮಾಜದ ಉಪ್ಪಳೆಪ್ಪ ಗುರುವಿನ, ನಾಗಯ್ಯ ತಾತ ಗೌಡನಭಾವಿ, ನಂಜುಂಡಯ್ಯ ಸಿಂಧನೂರು, ನಾಗಯ್ಯ ತುರ್ವಿಹಾಳ, ಸಂಗೊಳ್ಳಿ ರಾಯಣ್ಣನವರ ಮೂರ್ತಿದಾನಿ ಶಶಿಕುಮಾರ ಬೆಂಗಳೂರು, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಕೆಪಿಸಿಸಿ ಸದಸ್ಯ ವೆಂಕಟೇಶ, ನಾಗವೇಣಿ, ನಿರುಪಾದೆಪ್ಪ ವಕೀಲ, ಮಲ್ಲನಗೌಡ ಸುಂಕನೂರು ಸೇರಿದಂತೆ ಪಟ್ಟಣದ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಯತ್ರೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಕಂಬಳಿ ಹೊದಿಸಿ, ಟಗರು ನೀಡಿ ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ಪಟ್ಟಣಣದ ಬಸವೇಶ್ವರ ವೃತ್ತದಲ್ಲಿ ಶಾಸಕ ಯತ್ರೀಂದ್ರ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೃಷ್ಣ ಚಿಗರಿ. ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ. ಅಮರೇಶ, ರೈತ ಸೇವಾ ಸಹಕಾರ ಬ್ಯಾಂಕ್ ನಿರ್ದೇಶಕ ವೀರೇಶ ಪಾಟೀಲ, ಮಲ್ಲಯ್ಯ ಬಳ್ಳಾ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಂದಾನಪ್ಪ ಗುಂಡಳ್ಲಿ, ಆನಂದ ವಿರಾಪೂರ ಸೇರಿ ಹಲವಾರು ಮುಖಂಡರು ಮಾರ್ಲಾಪಣೆ ಮಾಡಿ ಸನ್ಮಾನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-32-1307681966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.