ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಪ್ರವೇಶ ಪರೀಕ್ಷೆ: ಈ ಬಾರಿ ದುಬೈನಲ್ಲೂ 'ನೀಟ್' ಕೇಂದ್ರ!

Last Updated 23 ಜುಲೈ 2021, 4:27 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ದುಬೈನಲ್ಲೂ ಪರೀಕ್ಷಾ ಕೇಂದ್ರವನ್ನು ತೆರೆಯಲುಶಿಕ್ಷಣ ಸಚಿವಾಲಯ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೊದಲು ಕುವೈತ್‌ನಲ್ಲಿ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿತ್ತು.

ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇದೇ ಮೊದಲ ಬಾರಿಗೆ ಕುವೈತ್‌ ಜೊತೆಗೆ ದುಬೈನಲ್ಲೂ ನೀಟ್ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವರ್ಷ ಒಟ್ಟು 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಕನ್ನಡ, ಹಿಂದಿ, ಪಂಜಾಬಿ, ಅಸ್ಸಾಮಿ, ಬಂಗಾಳಿ, ಒಡಿಯಾ, ಗುಜರಾತಿ, ಮರಾಠಿ, ತೆಲುಗು, ಮಲಯಾಳಂ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡಿದೆ.

ಆಗಸ್ಟ್ 1ರಂದು ನಡೆಯಬೇಕಿದ್ದ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155ರಿಂದ 198ಕ್ಕೆ ಏರಿಸಲಾಗಿದೆ. ಇದಕ್ಕೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT