ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಅಂಗಸಂಸ್ಥೆಯಾದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ಎಂಐಟಿ) ಸಿಎಫ್ಎ ಇನ್ಸ್ಟಿಟ್ಯೂಟ್ ವಿಶ್ವವಿದ್ಯಾಲಯ ಅಫಿಲಿಯೇಷನ್ ಕಾರ್ಯಕ್ರಮ (ಯುಎಪಿ) ಸರಣಿಗೆ ಸೇರಿದ ಭಾರತದ ಮೊದಲ ಎಂಜಿನಿಯರಿಂಗ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಾಗತಿಕ ಮಟ್ಟದಲ್ಲಿ ಹಣಕಾಸು ಮತ್ತು ಹೂಡಿಕೆ ಕ್ಷೇತ್ರದಲ್ಲಿ ಅತ್ಯುನ್ನತ ಗುಣಮಟ್ಟ ಕಾಪಾಡಿಕೊಳ್ಳುವ ಸಿಎಫ್ಎ ಇನ್ಸ್ಟಿಟ್ಯೂಟ್ನೊಂದಿಗೆ ಕೈಜೋಡಿಸಿರುವುದು ಎಂಐಟಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

ಮಣಿಪಾಲದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಸಿಎಫ್ಎ ಇನ್ಸ್ಟಿಟ್ಯೂಟ್ನ ಪ್ರತಿನಿಧಿಗಳಾದ ಸೈಮ್ ಫಕಿಹ್, ಅಂಜನಾ ನಹರ್ ಅವರು ಮಾಹೆಯ ಕುಲಸಚಿವ ಡಾ.ಪಿ. ಗಿರಿಧರ್ ಕಿಣಿ ಅವರಿಗೆ ವಿಶ್ವವಿದ್ಯಾಲಯದ ಹೊಸ ಮಾನ್ಯತೆಯ ಸ್ಮರಣ ಫಲಕ ಹಸ್ತಾಂತರಿಸಿದರು. ಎಂಐಟಿ ನಿರ್ದೇಶಕ ಕಮಾಂಡರ್ ಅನಿಲ್ ರಾಣಾ, ಕುಂಚಂ ಶ್ಯಾಮ್ ಪ್ರಸಾದ್, ಯೋಗೇಶ್ ಪೈ ಪಿ. ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-1791198519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.