ಸೋಮವಾರ, ಮಾರ್ಚ್ 27, 2023
29 °C

ಕೆ–ಸೆಟ್ ಫಲಿತಾಂಶ ಪ್ರಕಟ: 4,779 ಮಂದಿಗೆ ಅರ್ಹತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಜುಲೈ 25 ರಂದು ನಡೆಸಿದ್ದ ಕರ್ನಾಟಕ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆಯ (ಕೆ–ಸೆಟ್) ಫಲಿತಾಂಶ ಪ್ರಕಟಗೊಂಡಿದ್ದು, ಶೇ 6.84ರಷ್ಟು ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತೆ ಪಡೆದುಕೊಂಡಿದ್ದಾರೆ.

2,470 ಪುರುಷರು ಮತ್ತು 2,309 ಮಹಿಳೆಯರು ಒಳಗೊಂಡಂತೆ ಒಟ್ಟು 4,779 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಕೆ–ಸೆಟ್‌ ಮುಖ್ಯಸ್ಥರೂ ಆಗಿರುವ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ 11 ಕೇಂದ್ರಗಳಲ್ಲಿ 41 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು. 83,907 ಮಂದಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. 69,857 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.

ವಾಣಿಜ್ಯ ವಿಷಯದಲ್ಲಿ ಅತಿಹೆಚ್ಚು ಮಂದಿ (888) ಅರ್ಹತೆ ಪಡೆದುಕೊಂಡಿದ್ದಾರೆ. ಕನ್ನಡ ವಿಷಯದಲ್ಲಿ 397, ರಾಜ್ಯಶಾಸ್ತ್ರ 378, ಇತಿಹಾಸ 325, ಅರ್ಥಶಾಸ್ತ್ರ 308, ಇಂಗ್ಲಿಷ್‌ನಲ್ಲಿ 306 ಅಭ್ಯರ್ಥಿಗಳು ಅರ್ಹತೆ ಗಳಿಸಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು