ಮೊಳಕಾಲ್ಮುರು: ‘ಶಾಲೆಗಳು ಸಮಗ್ರವಾಗಿ ಅಭಿವೃದ್ಧಿ ಹೊಂದಲು ಸಾರ್ವಜನಿಕರು ಮತ್ತು ಪೋಷಕರ ಸಹಕಾರ ಅಗತ್ಯ’ ಎಂದು ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್ ಹೇಳಿದರು.

ಇಲ್ಲಿನ ಆದರ್ಶ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.

‘ಹಳೆಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಿದರೆ ಶಾಲೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬಹುದು. ಈ ನಿಟ್ಟಿನಲ್ಲಿ ಸರ್ಕಾರವೂ ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಹೆಸರಿನಲ್ಲಿ ಯೋಜನೆ ಆರಂಭಿಸಿದೆ. ನಮ್ಮ ಶಾಲೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಂತಸದ ಸಂಗತಿ’ ಎಂದರು.

ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿರುವ ಎಸ್.ಆರ್. ಚೈತನ್ಯ, ಟಿ.ಜಿ. ನಿತಿನ್, ಬಿ.ತೇಜಶ್ರೀ, ಕೆ.ವಿ. ಸಂಜನಾ, ಎಸ್.ಕವನಾ, ಶ್ರೀಶಾಂತ್, ಸೂರ್ಯ ಅವರನ್ನು ಅಭಿನಂದಿಸಿ, ಗುಂಡ್ಲೂರು ಟೆಲಿಪೋನ್ ಸಿದ್ದಯ್ಯ ಸ್ಮರಣಾರ್ಥ ನಗದು ಬಹುಮಾನ ವಿತರಿಸಲಾಯಿತು.

ವಿಜಯಮ್ಮ ವೆಂಕಟರಮಣಪ್ಪ ಅವರು 200 ತಟ್ಟೆ, ಎಸ್ಡಿಎಂಸಿ ಅಧ್ಯಕ್ಷ ಎಸ್. ನಾಗರಾಜ್ ಅವರು 200 ಲೋಟ, ಉಪಾಧ್ಯಕ್ಷೆ ಎಸ್. ನಾಗವೇಣಿ 50 ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.

ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಯೋಜನೆ ವೈದ್ಯ ಗೋವಿಂದರಾಜು ಅವರು ಎಚ್ಪಿವಿ ವ್ಯಾಕ್ಸಿನ್ ಹಾಕಿಸುವುದರಿಂದ ಆಗುವ ಪ್ರಯೋಜನದ ಕುರಿತು ಜಾಗೃತಿ ಮೂಡಿಸಿದರು.

ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸವಿತಾ, ಶಿಕ್ಷಕರಾದ ಎಂ.ರೂಪಾ, ಮುಜಾಮಿಲ್, ಡಿ.ಎನ್. ನಂದೀಶ್, ಬಿ.ಎಸ್. ವಿಜಯಲಕ್ಷ್ಮಿ, ಸಿ. ಮೋಹನ್ ಕುಮಾರ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-44-780882452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.