ಮೊಳಕಾಲ್ಮುರು: ‘ಎಲ್ಲಾ ಶೋಷಿತ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಮಾತ್ರ ಸಾಮಾಜಿಕವಾಗಿ, ಆರ್ಥಿಕವಾಗಿ ಉನ್ನತಿ ಹೊಂದಲು ಸಾಧ್ಯ’ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ಹೇಳಿದರು.

ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಈಚೆಗೆ ಬಿ.ಆರ್. ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

‘ಹೆಚ್ಚುತ್ತಿರುವ ಪೈಪೋಟಿಯ ಕಾಲದಲ್ಲಿ ವಿದ್ಯಾಭ್ಯಾಸದ ವಿಚಾರದಲ್ಲಿ ನಿರ್ಲಕ್ಷ್ಯ ಸರಿಯಲ್ಲ. ಗುರಿ ಮುಂದಿಟ್ಟುಕೊಂಡು ಶ್ರಮ ವಹಿಸಿದಲ್ಲಿ ಸಾಧನೆ ಮಾಡಬಹುದು. ಸರ್ಕಾರ ಜಾರಿಗೆ ತಂದಿರುವ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

‘ಜಯಂತಿಗಳು ಆಡಂಬರಕ್ಕೆ ಸೀಮಿತವಾಗದೆ ಸಂಸ್ಕೃತಿ ಹಾಗೂ ದಾರ್ಶನಿಕರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ವೇದಿಕೆಗಳಾಗಬೇಕು. ಸಾಧನೆ ಯಾರೊಬ್ಬರ ಸ್ವತ್ತಲ್ಲ. ಛಲ ಇದ್ದಲ್ಲಿ ಎಲ್ಲರಿಗೂ ಸಾಧ್ಯ ಎಂಬುದನ್ನು ತೋರಿಸಿಕೊಡಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಜಯಂತ್ ಹೇಳಿದರು.

ದಸಂಸ ಜಿಲ್ಲಾ ಸಂಚಾಲಕ ಬಿ.ಟಿ. ನಾಗಭೂಷಣ, ಮುಖಂಡರಾದ ಸಣ್ಣವೀರಣ್ಣ, ಚಂದ್ರಣ್ಣ, ಸಿದ್ದಣ್ಣ, ಉಪ ಪ್ರಾಂಶುಪಾಲ ಷಣ್ಮುಖಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-44-1987299731

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.