ಮೊಳಕಾಲ್ಮುರು: ‘ಇತ್ತೀಚಿನ ದಿನಗಳಲ್ಲಿ ಯುವಸಮೂಹದಲ್ಲಿ ಸಂಘಟನಾ ಶಕ್ತಿ ಕಡಿಮೆಯಾಗುತ್ತಿರುವುದು ಆತಂಕದ ವಿಷಯ’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ.ಆರ್.ಅಂಬೇಡ್ಕರ್ ಮತ್ತು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಬೇರೆ ಜನಾಂಗಗಳಿಗೆ ಹೋಲಿಕೆ ಮಾಡಿದಲ್ಲಿ ಪರಿಶಿಷ್ಟ ಜಾತಿಯವರು ಶಿಕ್ಷಣ ಪಡೆಯುವಲ್ಲಿ ಹಿಂದೆ ಉಳಿದಿದ್ದಾರೆ. ಇದು ಜನಾಂಗದ ಸಂಘಟನೆ, ಆರ್ಥಿಕ ಉನ್ನತಿ ಮತ್ತು ಮುಖ್ಯವಾಹಿನಿಗೆ ಬರಲು ಅಡ್ಡಿಯಾಗಿದೆ’ ಎಂದು ಹೇಳಿದರು.

‘ಶೀಘ್ರವೇ ಒಳ ಮೀಸಲಾತಿ ಗೊಂದಲ ಬಗೆಹರಿಯುವ ವಿಶ್ವಾಸವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ’ ಎಂದು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಬಿ. ಯೋಗೇಶ್ ಬಾಬು ಭರವಸೆ ನೀಡಿದರು.

ತಹಶೀಲ್ದಾರ್ ಟಿ.ಜಗದೀಶ್, ತಾ.ಪಂ. ಇಒ ಎಂ. ಹನುಮಂತಪ್ಪ, ಸಿಪಿಐ ಆರ್. ನಾಗರಾಜ್, ಅಧಿಕಾರಿಗಳಾದ ಎನ್. ನಿರ್ಮಲಾದೇವಿ, ಎಂ.ವಿ.ಮಂಜುನಾಥ್, ಹರೀಶ್, ನವೀನ್ ಕುಮಾರ್, ಡಾ. ಗಿರೀಶ್, ದಸಂಸ ಮುಖಂಡರಾದ ಜಿ. ಪ್ರಕಾಶ್, ಬಿ.ಟಿ. ನಾಗಭೂಷಣ, ಕೊಂಡಾಪುರ ಪರಮೇಶ್ವರಪ್ಪ, ರಾಯಾಪುರ ನಾಗೇಂದ್ರಪ್ಪ, ಹನುಮಂತಪ್ಪ, ನಾಗರಾಜ್, ಎಸ್. ಪರಮೇಶ್, ನಾಗರಾಜಕಟ್ಟೆ, ಜಿ.ಬಿ. ಮಲ್ಲಿಕಾರ್ಜುನ್ ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮುಖ್ಯಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಇರಿಸಿ ಮೆರವಣಿಗೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-44-2019953390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.