ಮೂಡುಬಿದಿರೆ: ಸಹಕಾರ ಸಂಘಗಳು ಬ್ಯಾಂಕಿಂಗ್ ವ್ಯವಹಾರವಷ್ಟೇ ಸೀಮಿತವಾಗದೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದರ ಜತೆಗೆ ಸಮಾಜ ಮುಖಿ ಸೇವೆಗಳಲ್ಲೂ ತೊಡಗಿಕೊಂಡು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ.ತಾರಾನಾಥ ಪೂಜಾರಿ ಹೇಳಿದರು.

ಇಲ್ಲಿನ ರಾಮಯ್ಯ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು.

ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ನಮ್ಮ ಸಂಘ ಆರ್ಥಿಕವಾಗಿ ಹಿಂದುಳಿದವರಿಗೆ ಆದ್ಯತಾ ನೆಲೆಯಲ್ಲಿ ಸಾಲ ನೀಡುತ್ತದೆ. ಹೆಣ್ಣುಮಕ್ಕಳ ಮದುವೆ ಹಾಗೂ ಅವರ ಶಿಕ್ಷಣ, ಸಾಮಾಜಿಕ ಸೇವೆಗಳಿಗೂ ಆದ್ಯತೆ ನೀಡುತ್ತಾ ಬಂದಿದೆ ಎಂದರು.

ಐ.ತಾರಾನಾಥ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 100 ಅಂಕ ಗಳಿಸಿದ ದಿಶಾ ಅವರನ್ನು ಸನ್ಮಾನಿಸಲಾಯಿತು.

ಬೆಳುವಾಯಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಸ್ಥಿರ ಠೇವಣಿ ಉದ್ಘಾಟನೆ, ಬಿಲ್ಲವ ಸಂಘದ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಭದ್ರತಾ ಕೋಶ ಉದ್ಘಾಟಿಸಿದರು.

ಸೀತಾರಾಮ ಆಚಾರ್ಯ ಇ–ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ಪ್ರಮುಖರಾದ ಆತ್ಮಶಕ್ತಿ ಸಹಕಾರಿ ಸಂಘದ ನಿರ್ದೇಶಕರಾದ ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ಸೀತಾರಾಮ ಎನ್., ರಾಮನಾಥ ಸನಿಲ್, ಮುದ್ದುಮೂಡುಬೆಳ್ಳೆ, ದಿವಾಕರ ಬಿ.ಪಿ. ಗೋಪಾಲ್ ಎನ್, ಚಂದ್ರಾವತಿ, ಉಮಾವತಿ, ಶಾಖಾ ಪ್ರಬಂಧಕಿ ರವಿಕಲಾ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸಿಇಒ ಸೌಮ್ಯಾ ವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ ಪೂಜಾರಿ ವಂದಿಸಿದರು. ವಿಶ್ವನಾಥ ರೆಂಜಾಳ ನಿರೂಪಿಸಿದರು.

ಉದ್ಘಾಟನೆ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ಶೇ 10 ವಿಶೇಷ ಬಡ್ಡಿ, 1000 ದಿನಗಳ ಠೇವಣಿಗಳಿಗೆ ಶೇ 10.50 ಬಡ್ಡಿದರ ಸೌಲಭ್ಯಗಳಿಗೆ ಚಾಲನೆ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-29-1830670960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.