ಮೂಡುಬಿದಿರೆ: ‘ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಾರ ಮನೋಭಾವ ಹೆಚ್ಚಾಗುತ್ತಿದ್ದು, ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿವೆ. ಅನುದಾನಿತ ಶಾಲೆಗಳು, ಸರ್ಕಾರಿ ಶಾಲೆಗಳು ಸೊರಗುತ್ತಿವೆ’ ಎಂದು ಬಾಬುರಾಜೇಂದ್ರ ಪ್ರಸಾದ್ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಹೇಳಿದರು.

ಬಾಬುರಾಜೇಂದ್ರ ಪ್ರೌಢಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

60 ವರ್ಷದ ಇತಿಹಾಸ ಇರುವ ಬಾಬುರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ. ದಾನಿಗಳ ಸಹಕಾರದಿಂದ ಈ ಶಾಲೆ ನಡೆಯುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳು ದುರ್ಬಲಗೊಳ್ಳಬಾರದು. ಶಾಲೆಯ ಅಭಿವೃದ್ಧಿಗೆ ವೈಯುಕ್ತಿಕ ನೆಲೆಯಲ್ಲಿ ಈ ವರ್ಷವೂ ₹1 ಲಕ್ಷ ಆರ್ಥಿಕ ಸಹಕಾರ ನೀಡಿದ್ದೇನೆ ಎಂದರು.

ಪ್ರೌಢಶಾಲೆ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳೂ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.

ದಾನಿಗಳಾದ ಪುಷ್ಪರಾಜ್ ಜೈನ್, ಸುಮಾ ರವೀಂದ್ರ ಪರಾಡ್ಕರ್, ಮೂಕಾಂಬಿಕ ಶ್ರೀಧರ್ ಭಟ್, ನಿವೃತ್ತ ಕಚೇರಿ ಸಹಾಯಕ ದಾಮೋದರ ಆಚಾರ್ ಭಾಗವಹಿಸಿದ್ದರು. ಭರತ್ ನಾಯಕ್ ನಿರೂಪಿಸಿದರು. ಮುಖ್ಯ ಶಿಕ್ಷಕಿ ತೆರೆಸಾ ಕಾರ್ಡೋಜಾ ಸ್ವಾಗತಿಸಿ, ಕಿರಣ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-536068060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.