ಮೂಡುಬಿದಿರೆ: ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಕಠಿಣ ಪರಿಶ್ರಮ ಮತ್ತು ನಂಬಿಕೆ ಅಗತ್ಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಝೀರ್ ಹೇಳಿದರು.

ಶನಿವಾರ ಇಲ್ಲಿನ ಮಹಾವೀರ ಕಾಲೇಜಿನ ವಜ್ರಮಹೋತ್ಸವ ಸಂಭ್ರಮಾಚರಣೆ, ಹಾಸ್ಟೆಲ್ನ ನೂತನ ಮೇಲಂತಸ್ತು ಕಟ್ಟಡ ಉದ್ಘಾಟನೆ ಹಾಗೂ ಸಂಸ್ಥಾಪಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕೆಯ ಮಹತ್ವ, ನಂಬಿಕೆ ಹಾಗೂ ಸಾಮಾಜಿಕ ಬದಲಾವಣೆ ಶಿಕ್ಷಣದಿಂದ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಬಗ್ಗೆ ಗಮನಹರಿಸಬೇಕುಎಂದರು.

ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಡಾ.ಟಿ.ಎಂ.ಎ ಪೈ ಹುಟ್ಟು ಹಾಕಿದ ಈ ಸಂಸ್ಥೆ ಎತ್ತರಕ್ಕೆ ಬೆಳೆದಿದೆ ಎಂದು ಹೇಳಿದರು.

ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಅನಕ್ಷರತೆ ನಿವಾರಣೆಯಾದರೆ ಮಾತ್ರ ಬಡತನ ನಿವಾರಣೆಯಾಗಲು ಸಾಧ್ಯವಿದೆ. ಮಕ್ಕಳು ಕಲಿತು ಉದ್ಯೋಗ ಸಿಗಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಣ ಒದಗಿಸಲಾಗುತ್ತಿದೆ. ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಉದ್ಯಮಿ ಮನೋಹರ್ ಎಸ್.ಮೂಡುಬಿದಿರೆ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-58300009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.