ಮೂಡುಬಿದಿರೆ: ‘ವಕೀಲರು ನ್ಯಾಯಾಲ ಯಗಳಲ್ಲಿ ವಾದ ಮಂಡಿಸುವವರಷ್ಟೇ ಅಲ್ಲ; ಅವರು ಸಮಾಜದ ನ್ಯಾಯದ ಕಾವಲುಗಾರರು, ಹಕ್ಕುಗಳ ರಕ್ಷಕರು ಮತ್ತು ಜನ ಸೇವೆಯ ನಿಜವಾದ ಪ್ರತಿನಿ ಧಿಗಳು’ ಎಂದು ಕರ್ನಾಟಕ ಹೈಕೋರ್ಟ್ ನ್ಯಾ.ಎಚ್.ಪಿ.ಸಂದೇಶ್ ಹೇಳಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಕಾನೂನು ವಿದ್ಯಾರ್ಥಿಗಳು’ ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ದ್ವಿತೀಯ ವಲಯ ಕಾರ್ಯಾಗಾರವನ್ನು ಆಳ್ವಾಸ್ನ ಕೃಷಿಸಿರಿ ವೇದಿಕೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ವಿದ್ಯಾರ್ಥಿಗಳು ಸಮಾಜದಲ್ಲಿ ನ್ಯಾಯ ಸ್ಥಾಪನೆಗೆ ಪ್ರೇರಕ ಶಕ್ತಿಯಾಗಬೇಕು. ಜೀವನದಲ್ಲಿ ಯಶಸ್ಸು ಸಾಧಿಸಲು ಛಲ ಅತ್ಯಂತ ಮುಖ್ಯ. ಕೆಲವರು ಕಾನೂನು ಪದವಿಯನ್ನು ಸ್ವತಃ ಆಯ್ಕೆ ಮಾಡದೆ, ಅದನ್ನು ಜನಸೇವೆಯ ಮಾರ್ಗವನ್ನಾಗಿ ಮಾಡಿದರೆ, ನಮ್ಮ ಜೀವನಕ್ಕೂ ಸಮಾಜಕ್ಕೂ ಅರ್ಥಪೂರ್ಣವಾದ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಬಸವರಾಜು, ಮೂಡುಬಿದಿರೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಧುಕರ್ ಪಿ.ಭಾಗವತ್, ಪ್ರಾಂಶುಪಾಲ ಮಹಾಂತೇಶ್ ಜಿ.ಎಸ್. ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್ ಸ್ವಾಗತಿಸಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ವಂದಿಸಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ವೇಣುಗೋಪಾಲ ನಿರೂಪಿಸಿದರು.

ನಂತರ ನಡೆದ ತಾಂತ್ರಿಕ ಅಧಿವೇಶನಗಳಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ 1987, ಕಾನೂನು ಕಾಲೇಜುಗಳಲ್ಲಿ ಕಾನೂನು ಸೇವಾ ಕ್ಲಿನಿಕ್ ಹಾಗೂ ಕಾನೂನು ಸೇವಾ ಶಿಬಿರಗಳ ಆಯೋಜನೆ ಕುರಿತು ತಜ್ಞರು ಉಪನ್ಯಾಸ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-1438128300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.