ಮೂಡಲಗಿ: ‘ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಸಹಬಾಳ್ವೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ’ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಕನಕಪ್ಪ ಪೂಜಾರ ಹೇಳಿದರು.

ತಾಲ್ಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬರಕ್ಕೆ ಭೇಟಿ ನೀಡಿ ಶಿಬಿರದಲ್ಲಿಯ ಕಾರ್ಯಚಟುವಟಿಕೆ ವೀಕ್ಷಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ. ಸಂಜೀವ ತಳವಾರ, ಚಿಕ್ಕೋಟಿ ಜಿಲ್ಲೆ ಪ್ರಭಾರಿ ಸಂಯೋಜನಾಧಿಕಾರಿ ಶಂಕರ ನಿಂಗನೂರ ಮಾತನಾಡಿ ಎನ್ಎಸ್ಎಸ್ವು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಬದುಕುವ ಕಲೆಯನ್ನು ತಿಳಿಸಿಕೊಡುತ್ತದೆ ಎಂದರು.

ಶಿಬಿರಾಧಿಕಾರಿ ರಾಜೇಂದ್ರ ಆಸಂಗಿ, ಸರಸ್ವತಿ ರಬಕವಿ, ಹನುಮಂತ ಮರಡ್ಡಿ, ಸದಾಶಿವ ಹೊಸಮನಿ, ಕಾಲೇಜು ಸಿಬ್ಬಂದಿ ಹಾಗೂ ಧರ್ಮಟ್ಟಿ ಗ್ರಾಮದ ಗಣ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-21-2075503790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.