ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಖಚಿತ’ ಎಂದು ಗೋಕಾಕದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವಿಭಾಗೀಯ ಸಂಯೋಜಕ ರಾಮಚಂದ್ರ ಕಾಕಡೆ ಹೇಳಿದರು.

ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ಬಿ.ಪಿ.ಇಡಿ ಹಾಗೂ ಎಂ.ಪಿ.ಇಡಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಕಲಿಕೆಯ ಅವಧಿಯನ್ನು ವ್ಯರ್ಥ ಮಾಡಿಕೊಳ್ಳದೆ ಗುರಿಯತ್ತ ಸಾಗಬೇಕು. ದೇಶ ಮತ್ತು ಸಮಾಜವು ಮೆಚ್ಚುವಂತ ವ್ಯಕ್ತಿತ್ವವ ರೂಪಿಸಿಕೊಳ್ಳಬೇಕು’ ಎಂದರು.

ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿ, ‘ಪ್ರತಿ ವಿದ್ಯಾರ್ಥಿಯಲ್ಲಿ ಪ್ರತಿಭೆ, ಕೌಶಲತೆ ಇದ್ದು, ಅದನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮ ಸಾಧನೆಯು ನಮ್ಮ ಸಂಸ್ಥೆಗೆ ಹೆಸರು ತರುವಂತವಾಗಲಿ’ ಎಂದರು.

2025ರ ಏಕಲವ್ಯ ಪ್ರಶಸ್ತಿ ಪಡೆದ ಐಶ್ವರ್ಯ ಕರಿಗಾರ ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಗೋಪವ್ವ ಕೊಡಕಿ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಶ್ವವಿದ್ಯಾಲಯ ಬ್ಲೂ ಆಗಿರುವ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿದರು.

ಪ್ರಾಚಾರ್ಯ ಡಾ.ಎಂ.ಕೆ. ಕಂಕಣವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳು ಎರಡು ವರ್ಷಗಳ ಕಲಿಕಾ ಅವಧಿಯ ಅನುಭವನ್ನು ಹಂಚಿಕೊಂಡರು.

ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಪ್ಪಾಸಾಹೇಬ ಹೊಸಕೋಟಿ, ಪದವಿ ಕಾಲೇಜು ಆಡಳಿತಾಧಿಕಾರಿ ಎಸ್.ಎಲ್. ಚಿತ್ರಗಾರ, ಎಲ್.ಬಿ. ಮನ್ನಾಪೂರ, ಬಿ.ಕೆ. ಬಡಗಣ್ಣವರ, ಬಿ.ಎಸ್. ಕಂಬಾರ, ಎಸ್.ಎಂ. ಹಳ್ಳೂರ, ಶಿವಾಜಿ ಮಾಲೋಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-21-2023009870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.