ಮೂಡಿಗೆರೆ: ‘ಸಮಾಜದ ಏಳಿಗೆಗೆ ಶಿಕ್ಷಣವೇ ದಾರಿಯಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಕೊರತೆ ಉಂಟಾಗಬಾರದು’ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಪಟ್ಟಣದ ಕೆ.ಎಂ. ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿನಿಲಯಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವು 4 ದಶಕಗಳ ಹಿಂದೆ ನಿರ್ಮಾಣವಾಗಿದ್ದು, ಶಿಥಿಲಾವಸ್ಥೆಗೆ ತಲುಪಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ₹5 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ತಾಲ್ಲೂಕಿನ ಎಲ್ಲ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿ ನಿಲಯದಲ್ಲಿ ದಾಖಲಾಗುವ ವಿದ್ಯಾರ್ಥಿಳ ಎಲ್ಲ ವೆಚ್ಚವನ್ನು ಸರ್ಕಾರ ಭರಿಸುವುದರಿಂದ, ಪೋಷಕರು ಇದರ ಸದುಪಯೋಗ ಪಡೆದು ಮಕ್ಕಳು ಸುಶಿಕ್ಷಿತರಾಗುವಂತೆ ಮಾಡಬೇಕು’ ಎಂದರು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಕೆ. ವೆಂಕಟೇಶ್, ಹಜ್ಜು, ಸಂಪತ್ ಬಿಳಗುಳ, ಜಯಮ್ಮ, ಸಿ.ಬಿ. ಶಂಕರ್, ಸುರೇಂದ್ರ ಉಗ್ಗೇಹಳ್ಳಿ, ಸಬ್ಲಿ ದೇವರಾಜ್, ಹೊಸ್ಕೆರೆ ರಮೇಶ್, ಅಣ್ಣೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-126-136629795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.