ಬ್ಯಾಡಗಿ: ‘ತಾಂತ್ರಿಕ ಅಧ್ಯಯನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಅವಕಾಶಗಳಿವೆ. ಶಿಕ್ಷಕರೂ ಕಾಲಕ್ಕೆ ಅನುಗುಣವಾಗಿ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಮಾತ್ರ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ’ ಎಂದು ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳ್ಳಾರಿ ರುದ್ರಪ್ಪ ಸಿಬಿಎಸ್ಇ ವಸತಿ ಶಾಲೆಯಲ್ಲಿ ಎರಡು ದಿನಗಳವರೆಗೆ ಆಯೋಜಿಸಿದ್ದ ಶಿಕ್ಷಕರ ಪ್ರೇರಣಾ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಿದ್ಧಲಿಂಗಸ್ವಾಮಿ ನೀರಲಗಿ ಮಾತನಾಡಿ, ‘ಶಾಲೆ ಎಂಬುದು ಕೇವಲ ಅಂಕಗಳಿಕೆಗೆ ಸೀಮಿತಗೊಳ್ಳದೆ ಮಕ್ಕಳ ಆಸಕ್ತಿ, ಸಂತೋಷ ಹಾಗೂ ಕನಸುಗಳನ್ನು ಸಾಕಾರಗೊಳಿಸುವ ತಾಣವಾಗಬೇಕಾಗಿದೆ. ಮಕ್ಕಳಿಗೆ ಸಂತೋಷದ ವಾತಾವರಣ ರೂಪಿಸುವ ಉದ್ದೇಶದಿಂದ ‘ಹ್ಯಾಪಿ ಕ್ಲಾಸ್ರೂಂ’ ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಲಾಗಿದೆ’ ಎಂದರು.

ಪ್ರಾಚಾರ್ಯ ಪ್ರಕಾಶ ಬಿ.ಸಿ ಮಾತನಾಡಿ, ‘ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ. ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಶಿಕ್ಷಣ, ವಿಜ್ಞಾನ ಹಾಗೂ ತಾಂತ್ರಿಕ ಕೌಶಲಗಳ ಕುರಿತು ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿಯೇ ಮಾರ್ಗದರ್ಶನ ನೀಡಬೇಕು’ ಎಂದರು.

ಈ ವೇಳೆ ಸಂಸ್ಥೆಯ ಪದಾಧಿಕಾರಿಗಳಾದ ಚನ್ನವೀರಪ್ಪ ಬಳ್ಳಾರಿ, ಎಸ್.ಆರ್. ಬಳ್ಳಾರಿ, ಪ್ರಾಚಾರ್ಯರಾದ ಸತೀಶ ಹಿರೇಮಠ, ರೋಹಿತ್ ಮಾತಾಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-22-1635240990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.