ಮುದ್ದೇನಹಳ್ಳಿ: ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಗ್ರಾ.ಪಂ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಗ್ರಾಮದ ಗ್ರಂಥಾಲಯದಲ್ಲಿ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ ಆಯೋಜಿಸಲಾಗಿದೆ.

ಸೋಮವಾರದ ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಆರ್.ಮಟಮಪ್ಪ, ಮಕ್ಕಳ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಮೂಡಿಸಿದರು.

‘18 ವರ್ಷಗಳ ಒಳಗಿನ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರಗಳು ಹಲವು ಕಾಯ್ದೆಗಳನ್ನು ಜಾರಿಗೊಳಿಸಿವೆ. ಮಕ್ಕಳಿಗೆ ಬದುಕುವ ಹಕ್ಕು, ರಕ್ಷಣೆ ಹಕ್ಕು ಇವೆ. ಮಕ್ಕಳಿಗೆ ಪೋಷಕರು, ತಂದೆ ತಾಯಿ ಅಥವಾ ಯಾರೇ ಆಗಲಿ ಹಿಂಸೆ ನೀಡುವಂತಿಲ್ಲ. ಮಕ್ಕಳಿಗೆ ಪ್ರೋತ್ಸಾಹ ನೀಡಿ ಅವರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ತಂದೆ ತಾಯಿ ಮಕ್ಕಳಿಗೆ ಮೊಬೈಲ್ ನೀಡಬಾರದು. ಜ್ಞಾನದ ಅವಶ್ಯಕತೆಗೆ ಮಾತ್ರ ಮೊಬೈಲ್ ನೀಡಿದರೂ ತಂದೆ ತಾಯಿ ಮಕ್ಕಳ ಬಳಿಯೇ ಇದ್ದು ಅವರಿಗೆ ಬೇಕಾದ ಮಾಹಿತಿ ನೀಡಬೇಕು ಎಂದರು.

ದೇಶವು ಅಭಿವೃದ್ಧಿ ಹೊಂದುತ್ತಿದ್ದರೂ ಬಾಲ್ಯ ವಿವಾಹ ನಿಷೇಧ ಸಂಪೂರ್ಣವಾಗಿ ಆಗಿಲ್ಲ. ಬಾಲಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಮಕ್ಕಳನ್ನು ದುಡಿಮೆಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ವಿಷಾದಿಸಿದರು.

ಮಕ್ಕಳ ರಕ್ಷಣೆಗೆ ಕಠಿಣ ಕಾನೂನುಗಳು ಇದ್ದರೂ, ಅರಿವು ಮೂಡಿಸುತ್ತಿದ್ದರೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ತಂದೆ ತಾಯಿ ಮಕ್ಕಳಿಗೆ ಕಾನೂನಿನ ಅರಿವನ್ನು ಹೆಚ್ಚಾಗಿ ಮೂಡಿಸಬೇಕು ಎಂದರು.

ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಎಂ.ಎನ್. ತಿಪ್ಪಯ್ಯ, ಜಿಲ್ಲಾ ಗ್ರಂಥಾಲಯ ಅಧ್ಯಕ್ಷರಾದ ಅಶ್ವತ್ ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-16-1521062860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.