ಮುದ್ದೇನಹಳ್ಳಿ (ಚಿಕ್ಕಬಳ್ಳಾಪುರ):ಇಲ್ಲಿನ ಸತ್ಯಸಾಯಿ ಗ್ರಾಮದ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ಎಸ್ಎಂಎಸ್ಐಎಂಎಸ್ಆರ್)ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಮಾನ್ಯತಾ ಮಂಡಳಿ (ಎನ್ಎಬಿಎಚ್) ಆರಂಭಿಕ ಹಂತದ ಮಾನ್ಯತೆ ನೀಡಿದೆ.

ಈ ಪ್ರತಿಷ್ಠಿತ ಮಾನ್ಯತೆಯಿಂದ ಸಂಸ್ಥೆಯು ರೋಗಿಯ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆ ಹಾಗೂ ಆಸ್ಪತ್ರೆ ನಿರ್ವಹಣೆಯ ರಾಷ್ಟ್ರೀಯ ಮಾನದಂಡ ಗಳನ್ನು ಸಮರ್ಥವಾಗಿ ಪಾಲಿಸುತ್ತಿದೆ ಎಂಬುದು ದೃಢಪಟ್ಟಿದೆ. ಸಂಪೂರ್ಣ ಉಚಿತ ಸೇವೆಗಳನ್ನು ನೀಡುವ ದೇಶದ ವಿರಳ ಗ್ರಾಮೀಣ ವೈದ್ಯಕೀಯ ಕಾಲೇಜುಗಳಲ್ಲಿ ಒಂದಾದ ಈ ಸಂಸ್ಥೆಗೆ ಹೊಸ ಗರಿಮೆ ಸಿಕ್ಕಿದಂತಾಗಿದೆ.

ಸದ್ಗುರು ಮಧುಸೂದನ ಸಾಯಿ ಅವರ ಮಾರ್ಗದರ್ಶನದಲ್ಲಿ 2025ರ ಜನವರಿಯಲ್ಲಿ ಆರಂಭವಾದ ಗುಣಮಟ್ಟ ಸುಧಾರಣಾ ಪ್ರಕ್ರಿಯೆ, ಒಂದು ವರ್ಷದ ನಿರಂತರ ಪರಿಶ್ರಮ, ಶಿಸ್ತು ಮತ್ತು ತಂಡದ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ.

‘ದೇಶದಲ್ಲಿರುವ 80 ಸಾವಿರದಿಂದ 90 ಸಾವಿರ ಆಸ್ಪತ್ರೆಗಳ ಪೈಕಿ ಶೇ 1.4ರಷ್ಟು ಆಸ್ಪತ್ರೆಗಳು ಮಾತ್ರ ಸಂಪೂರ್ಣ ಮಾನ್ಯತೆ ಪಡೆದಿವೆ. ಶೇ 3ರಷ್ಟು ಆಸ್ಪತ್ರೆಗಳು ಮಾತ್ರ ಆರಂಭಿಕ ಹಂತದ ಮಾನ್ಯತೆ ಹೊಂದಿವೆ. ಸಂಪೂರ್ಣ ಉಚಿತ ವೈದ್ಯಕೀಯ ಸೇವೆಗಳನ್ನು ನೀಡುವ ಆಸ್ಪತ್ರೆಗಳ ಸಂಖ್ಯೆ ತೀರಾ ಕಡಿಮೆ. ನಮ್ಮ ಸಂಸ್ಥೆಗೆ ಮಾನ್ಯತೆ ದೊರಕಿರುವುದು ಮೊದಲ ಹೆಜ್ಜೆಯಾಗಿದೆ. ಶೀಘ್ರದಲ್ಲೇ ಸಂಪೂರ್ಣ ಮಾನ್ಯತೆ ಪಡೆಯುವ ವಿಶ್ವಾಸವಿದೆ’ ಎಂದು ಸಂಸ್ಥೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಪದ್ಮಶ್ರೀ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-609606744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.