ಮುದ್ದೇಬಿಹಾಳ: ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದಿಂದ ಪ್ರತಿ ವರ್ಷ ಹಮ್ಮಿಕೊಳ್ಳಲಾಗುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ ‘ಪರಿಸರ ರಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3ರೊಳಗೆ, ಅಧ್ಯಕ್ಷರು, ಹಸಿರು ತೋರಣ ಗೆಳೆಯರ ಬಳಗ, 10ನೇ ಕ್ರಾಸ್, ಹುಡ್ಕೋ ಬಡಾವಣೆ, ಮುದ್ದೇಬಿಹಾಳ- 586212 ಈ ವಿಳಾಸಕ್ಕೆ ಸಲ್ಲಿಸಬೇಕು.

ಪರಿಸರ ಕ್ಷೇತ್ರದಲ್ಲಿ ಎಲೆಮರೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರೂ ಶಿಫಾರಸು ಮಾಡಬಹುದು. ಜೂನ್ 7ರಂದು ವಿಶ್ವ ಪರಿಸರ ದಿನಾಚರಣೆಯಲ್ಲಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449431022, 94810 81588 ಸಂಪರ್ಕಿಸಬೇಕು ಎಂದು ಬಳಗದ ಅಧ್ಯಕ್ಷ ಅಮರೇಶ ಗೂಳಿ ಕಾರ್ಯದರ್ಶಿ ಬಸವರಾಜ ಬಿಜ್ಜೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-26-186343158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.