ಮುದ್ದೇಬಿಹಾಳ: ಕನ್ನಡ ಕಡ್ಡಾಯವಾಗಿ ಅನ್ನದ ಭಾಷೆಯಾಗಲಿ, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬಂತೆ ಕನ್ನಡ ಭಾಷೆಯು ಶ್ರೀಮಂತವಾಗಲಿ, ನೆರೆಯ ರಾಜ್ಯಗಳ ಪ್ರಭಾವದಿಂದ ಕನ್ನಡ ಭಾಷಿಕರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನಾಚರಣೆ ಉದ್ದೇಶಿಸಿ ಮಾತನಾಡಿ, ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಾಡು-ನುಡಿ, ನೆಲ-ಜಲ ಹಾಗೂ ಸಂಸ್ಕೃತಿ ಪರಂಪರೆ ಉಳಿಸುವ ಬೆಳೆಸುವ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.

ನಗರ ಘಟಕದ ಅಧ್ಯಕ್ಷೆ ಜಯಶ್ರೀ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು.

ಸಾಹಿತ್ಯ ಪರಿಷತ್ತಿನ ಬಸವರಾಜ ನಾಲತವಾಡ, ಉದಯಕುಮಾರ ರಾಯಚೂರ ಮಾತನಾಡಿ, ಕನ್ನಡ ಸಂಸ್ಥಾಪನಾ ದಿನವನ್ನು ಸರ್ಕಾರವೇ ಆಚರಿಸಬೇಕೆಂದರು. ಪ್ರಾಸ್ತಾವಿಕವಾಗಿ ಬಸನಗೌಡ ಪಾಟೀಲ ಮಾತನಾಡಿದರು.

ಚಂದ್ರು ತಮದಡ್ಡಿ, ಸದಾಶಿವ ಮಠ,ಹುಸೇನ ಮುಲ್ಲಾ, ಸುರೇಶ ಶಿಂಧೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-1863731635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.